ಬೆಂಗಳೂರು: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆ ವಿಮಾನ (Flight) ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ.ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳುವ 44 ವಿಮಾನಗಳು ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್ ಇಂದು ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಕರ್ನಾಟಕ ಬಂದ್‌ಗೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಏರ್‌ಪೋರ್ಟ್ ಒಳಗಡೆ ಪ್ರತಿಭಟನೆಗೆ ಯತ್ನ – ಐವರು ಪೊಲೀಸರ ವಶಕ್ಕೆಕರ್ನಾಟಕ ಬಂದ್ ಹಿನ್ನೆಲೆ ಹೆಚ್ಚಿನ ಪ್ರಯಾಣಿಕರು ಕೊನೆ ಕ್ಷಣದಲ್ಲಿ ತಮ್ಮ ವಿಮಾನದ ಟಿಕೆಟ್‌ಗಳನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಕಾರಣಕ್ಕೆ ಹಲವು ವಿಮಾನಯಾನ ಸಂಸ್ಥೆಗಳು ವಿಮಾನ ಹಾರಾಟಗಳನ್ನು ರದ್ದು ಮಾಡಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಈವರೆಗೂ ಪರಿಹಾರ ಸಿಗದೇ ಇರೋ ಏಕೈಕ ಸಮಸ್ಯೆ ಕಾವೇರಿಯದ್ದು: ನಟ ಉಪೇಂದ್ರWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


