ಮಂಡ್ಯ: ಮಾಜಿ ಸಂಸದೆ ರಮ್ಯಾ ಅವರು ಬಿಜೆಪಿಗೆ ಸೇರುತ್ತಾರಾ? ಜಿಲ್ಲೆಯ ಬಿಜೆಪಿ ಕಾರ್ಯಕರ್ತರರೊಬ್ಬರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಬರೆದಿರುವ ಪತ್ರದಿಂದಾಗಿ ಈ ಪ್ರಶ್ನೆ ಈಗ ಎದ್ದಿದೆ.ರಮ್ಯಾ ಬಿಜೆಪಿಗೆ ಸೇರಲಿದ್ದಾರೆ ಎನ್ನುವ ಉಹಾಪೋಹವಿದ್ದು, ಒಂದು ವೇಳೆ ರಮ್ಯಾ ಅವರನ್ನು ಬಿಜೆಪಿಗೆ ಸೇರಿಸಿಕೊಂಡರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಿಜೆಪಿ ಕಾರ್ಯಕರ್ತ ಮಂಜುನಾಥ್ ಎಂಬವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.ರಮ್ಯಾ ಅವರು ಈ ಹಿಂದೆ ಬಿಜೆಪಿಯ ವಿರುದ್ಧವಾಗಿ ಮಾತನಾಡಿದ್ದಾರೆ. ನಾವು ಅವರ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ಮಾಡಿದ್ದೇವೆ. ಆದ್ರೆ ಈಗ ರಮ್ಯಾ ಬಿಜೆಪಿ ಸೇರುವ ಬಗ್ಗೆ ಊಹಾಪೋಹ ಕೇಳಿ ಬರುತ್ತಿದೆ. ಯಾವುದೇ ಕಾರಣಕ್ಕೂ ರಮ್ಯಾ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು. ಒಂದು ವೇಳೆ ರಮ್ಯಾ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದೆ ಆದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಂಜುನಾಥ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.Sign in to your account
Username or Email Address


Password

 Remember Me


