ಮಂಗಳೂರು: ಬಸ್ ಚಲಾಯುಸುತ್ತಿದ್ದ ಚಾಲಕನ ಶರ್ಟ್ ಕಿಸೆಯಲ್ಲೇ ಮೊಬೈಲ್ ಫೋನ್ ಸ್ಫೋಟಗೊಂಡು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ನಡೆದಿದೆ.ಮಡಂತ್ಯಾರಿನಿಂದ ಉಪ್ಪಿನಂಗಡಿಗೆ ಆಗಮಿಸುತ್ತಿದ್ದ ಖಾಸಗಿ ಬಸ್‍ವೊಂದರಲ್ಲಿ ಈ ಅವಘಡ ಸಂಭವಿಸಿದೆ. ಈ ರಸ್ತೆ ತುಂಬಾ ಕಿರಿದಾಗಿದ್ದರಿಂದ ಚಾಲಕನ ಗಮನವೆಲ್ಲಾ ಬಸ್ ಚಲಾಯಿಸುವ ಕಡೆ ಹಾಗೂ ಎದುರುಗಡೆಯಿಂದ ಬರುವ ವಾಹನಗಳತ್ತ ಇತ್ತು. ಮಾತ್ರವಲ್ಲದೇ ಬೆಳಗ್ಗಿನ ಸಮಯವಾಗಿದ್ದರಿಂದ ಪ್ರಯಾಣಿಕರಿಂದ ತುಂಬಿದ್ದ ಬಸ್ಸನ್ನು ಜಾಗರೂಕತೆಯಿಂದ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಚಾಲಕನ ಕಿಸೆಯಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇದರಿಂದ ಚಾಲಕ ಮಾತ್ರವಲ್ಲದೇ ಅವರ ಪಕ್ಕದಲ್ಲಿದ್ದ ಪ್ರಯಾಣಿಕರೂ ಒಮ್ಮೆ ಕಕ್ಕಾಬಿಕ್ಕಿಯಾದ್ರು.ಇಂಟೆಕ್ಸ್ ಕಂಪೆನಿಗೆ ಸೇರಿದ ಈ ಮೊಬೈಲ್ ಸ್ಫೋಟಗೊಂಡಿದ್ದರಿಂದ ಒಂದು ಕ್ಷಣ ಆ ಬಸ್ಸಿನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಚಾಲಕನ ಜಾಗರೂಕತೆಯಿಂದ ಭಾರೀ ಅಪಾಯವೊಂದು ತಪ್ಪಿದರೂ, ಚಾಲಕ ಸಂದೇಶ್ ಬಂದಾರು ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಮಾತ್ರವಲ್ಲದೆ ಅವರ ಶರ್ಟ್ ಭಾಗಶಃ ಸುಟ್ಟು ಹೋಗಿದೆ ಎಂಬುವುದಾಗಿ ತಿಳಿದುಬಂದಿದೆ.Sign in to your account
Username or Email Address


Password

 Remember Me


