ಬಾಗಲಕೋಟೆ: ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಬೀಳಗಿ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಬಸಪ್ಪ ಬೂಸರೆಡ್ಡಿ ಸಾವನ್ನಪ್ಪಿದ ರೈತ. ಒಂದು ವಾರದ ಹಿಂದೆ ಬಸಪ್ಪ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡ ಬಸಪ್ಪರನ್ನು ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ರೈತ ಬಸಪ್ಪ ಮೃತಪಟ್ಟಿದ್ದಾರೆ.ರೈತ ಬಸಪ್ಪ ಬ್ಯಾಂಕ್ ಹಾಗೂ ಕೈ ಸಾಲ ಸೇರಿದಂತೆ ಸುಮಾರು 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಈ ಸಂಬಂಧ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


