ರಾಯಚೂರು: ಸಿಂಧನೂರು ತಾಲೂಕಿನ ಮೂರು ಮೈಲ್ ಕ್ಯಾಂಪ್ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.ಸಿಂಧನೂರು ನಗರದ ಮಹಿಬೂಬಾ ಕಾಲೋನಿಯ 26 ವರ್ಷದ ಮಾರುತಿ, 21 ವರ್ಷದ ಆದೇಶ್ ಮೃತ ದುರ್ದೈವಿಗಳು. ಸಿಂಧನೂರಿನಿಂದ ಮೂರು ಮೈಲ್ ಕ್ಯಾಂಪ್ ಗೆ ಮೂವರು ಒಂದೇ ಬೈಕ್‍ನಲ್ಲಿ ತೆರಳುತ್ತಿದ್ದಾಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ಎರಡು ವಾಹನಗಳ ಅತಿವೇಗದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ.ಇನ್ನೋರ್ವ ಸವಾರ ಆಂಜನೇಯ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಲಾರಿ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.Sign in to your account
Username or Email Address


Password

 Remember Me


