ರಾಯಚೂರು: ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ರಾಯಚೂರಿನ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದಲ್ಲಿ ಜೆಸ್ಕಾಂ ಎಂಜಿನಿಯರ್ ಆತ್ಮಹತ್ಯೆಗೆ ಯತ್ನಿಸಿ ಇದೀಗ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.ಶ್ರೀಧರ್ ಜೋಶಿ ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಕಿರಿಯ ಅಭಿಯಂತರ. ವಿಷ ಸೇವಿಸುವ ಮುನ್ನ ಜೋಶಿ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳಾದ ಸೂಪರಿಂಡೆಂಟ್ ಎಂಜಿನಿಯರ್ ಕೃಷ್ಣಪ್ಪ, ಎಇಇ ದಾವಲಸಾಬ್ ಅವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ. ಮಾತ್ರವಲ್ಲದೇ ಅನಾವಶ್ಯಕವಾಗಿ ಪದೇ ಪದೇ ವರ್ಗಾವಣೆ ಮಾಡಿ ಕಿರುಕುಳ ನೀಡುತ್ತಿದ್ದಾರೆ ಅಂತಾನೂ ಬರೆದಿದ್ದಾರೆ.ಸದ್ಯ ಹಟ್ಟಿ ಚಿನ್ನದ ಗಣಿ ಆಸ್ಪತ್ರೆಯಲ್ಲಿ ಜೋಶಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಇದೀಗ ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


