ಮೈಸೂರು: ಗ್ರಾಮೀಣ ನೀರು ಪೂರೈಕೆ ಇಲಾಖೆಯ ಸೂಪರಿಟೆಂಡೆಂಟ್ ಇಂಜಿನಿಯರ್ ರಂಗನಾಥ್ ನಾಯಕ್ ಎಂಬವರ ಮನೆಯ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮೈಸೂರು ನಗರದ ವಿಜಯನಗರದ ಮೊದಲನೇ ಹಂತದಲ್ಲಿರುವ ಮನೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಂಗನಾಥ್ ನಗರದ ಗ್ರಾಮೀಣ ಪೂರೈಕೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರಿನ ಡಿವೈಎಸ್‍ಪಿ ಗಜೇಂದ್ರಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.ರಂಗನಾಥ್ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿಯಾಗಿದ್ದಾರೆ. ಇತ್ತ ಸಖರಾಯಪಟ್ಟಣದ ನಿವಾಸದ ಮೇಲೂ ಚಿಕ್ಕಮಗಳೂರಿನ ಎಸಿಬಿ ಡಿವೈಎಸ್‍ಪಿ ರಾಜು ಅವರ ನೇತೃತ್ವದಲ್ಲಿ ದಾಳಿಯಾಗಿದ್ದು, ಅಧಿಕಾರಿಗಳು ಕಡತಗಳ ಪರಿಶೀಲನೆ ಕಾರ್ಯ ಮಾಡುತ್ತಿದ್ದಾರೆ. Sign in to your account
Username or Email Address


Password

 Remember Me


