ಮಂಗಳೂರು: ಕಂಬ ಹತ್ತಿ ದುರಸ್ತಿ ಮಾಡುವ ವೇಳೆಯಲ್ಲಿ ವಿದ್ಯುತ್ ತಂತಿ ತಗುಲಿ ಮೆಸ್ಕಾಂ ಕಾರ್ಮಿಕ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ಪರಂಟೋಲು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಶ್ರೀಶೈಲ್ (28) ಸಾವನ್ನಪ್ಪಿದ ಕಾರ್ಮಿಕ. ಮೂಲತಃ ಬಾಗಲಕೋಟೆ ಜಿಲ್ಲೆಯ ನಿವಾಸಿಯಾದ ಶ್ರೀಶೈಲ್ ಕಳೆದ ಒಂದು ವರ್ಷಗಳಿಂದ ಪುತ್ತೂರು ಮೆಸ್ಕಾಂ ವಿಭಾಗದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.ವಿದ್ಯುತ್ ಕಂಬದ ಮೇಲೆ ಹತ್ತಿ ದುರಸ್ತಿ ಮಾಡುವ ವೇಳೆಯಲ್ಲಿ ಪಕ್ಕದಲ್ಲಿ ಹಾದು-ಹೋಗಿದ್ದ ಎಚ್‍ಟಿ ಲೈನ್ ತಂತಿ ಸ್ಪರ್ಶಿಸಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ. ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ದುರಸ್ಥಿ ಕಾರ್ಯ ಮಾಡಿದ್ದರಿಂದಲೇ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಹೇಳುತ್ತಾರೆ.ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


