ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಗರದ ವಿದ್ಯಾನಗರದ ಪಶ್ಚಿಮ ಬಡಾವಣೆಯಲ್ಲಿ ನಡೆದಿದೆ.ನಿರ್ಮಲಾ ಕಟ್ಟಿಮನಿ (40) ಗಂಡನಿಂದಲೇ ಕೊಲೆಯಾದ ಗೃಹಿಣಿ. ಪತಿ ನಾರಾಯಣಸ್ವಾಮಿ ಇಂದು ಬೆಳಗ್ಗೆ ಕುಡಿದ ಮತ್ತಿನಲ್ಲಿ ಬಂದು ಪತ್ನಿಯೊಂದಿಗೆ ಜಗಳವಾಡಿ ತಲೆಯ ಭಾಗಕ್ಕೆ ಸುತ್ತಿಗೆಯಿಂದ ಹೊಡೆದು ಹಾಗೂ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆಗೆ ಕೌಟುಂಬಿಕ ಕಾರಣ ಎನ್ನಲಾಗಿದೆ.ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿ ನಾರಾಯಣಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. Sign in to your account
Username or Email Address


Password

 Remember Me


