ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಿಗೆ ಏಪ್ರಿಲ್ 2 ನೇ ವಾರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ ಅಂತಾ ಚುನಾವಣಾ ಆಯೋಗದ ಮೂಲಗಳಿಂದ ಮಾಹಿತಿ ಸಿಕ್ಕಿದೆ.ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾಗಿರುವ ನಂಜನಗೂಡು ಕ್ಷೇತ್ರ ಮತ್ತು ಸಚಿವ ಮಹದೇವಪ್ರಸಾದ್ ನಿಧನದಿಂದ ತೆರವಾಗಿರುವ ಗುಂಡ್ಲುಪೇಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಈ ಮೂಲಕ ಡೈರಿ ವಾರ್ ಜೊತೆಗೆ ಎಲೆಕ್ಷನ್ ವಾರ್‍ಗೆ ಸಿಎಂ ಸಿದ್ದರಾಮಯ್ಯ ಮತ್ತು ಬಿಎಸ್‍ವೈ ರೆಡಿಯಾಗಲಿದ್ದಾರೆ.ಈ ಎರಡೂ ಕ್ಷೇತ್ರಗಳಲ್ಲಿ ಉಪಚುನಾವಣಾ ಕದನಕ್ಕೆ ಮುಂದಿನ ಎರಡು ಮೂರು ದಿನಗಳಲ್ಲಿ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ.Sign in to your account
Username or Email Address


Password

 Remember Me


