ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಸಮೀಪದಲ್ಲಿರುವ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಾಗುವಾನಿ ಮರ ಸೇರಿದಂತೆ ಇತರೆ ಮರಗಳಿಗೂ ಬೆಂಕಿ ಪಸರಿಸಿ ಲಕ್ಷಾಂತರ ರೂ. ಮೌಲ್ಯದ ಮರ ನಾಶವಾಗಿರುವ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ಜಿಲ್ಲೆಯ ಎನ್‍ಆರ್‍ಪುರ ತಾಲೂಕಿನ ಬಾಳೆಹೊನ್ನೂರಿನ ಮುದುಗುಣಿ ಅರಣ್ಯದಲ್ಲಿ ಬೆಂಕಿ ಕಾಣಿಸಿದೆ. ವಿಷಯ ತಿಳಿಸಿದ್ದರೂ ಸ್ಥಳಕ್ಕೆ ಅರಣ್ಯ ಸಿಬ್ಬಂದಿ ತಡವಾಗಿ ಆಗಮಿಸಿದ್ದಕ್ಕೆ ಸ್ಥಳೀಯರು ಇಲಾಖೆಯ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ಹೊರಬೀಳುತ್ತಿದ್ದಂತೆಯೇ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳಿಯರಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.Sign in to your account
Username or Email Address


Password

 Remember Me


