ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮೊದಲೇ ಪಕ್ಷಾಂತರ ಪರ್ವ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮುಟಾ ಕ್ಷೇತ್ರದ ಮಾಜಿ ಶಾಸಕ ದಿನಕರ್ ಶೆಟ್ಟಿ ಜೆಡಿಎಸ್‍ಗೆ ಗುಡ್‍ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಇಂದು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಧ್ಯಕ್ಷ ಬಿಎಸ್ ಯಡಿಯರೂಪ್ಪ ಸಮ್ಮುಖದಲ್ಲಿ ದಿನಕರ್ ಶೆಟ್ಟಿ ಕಮಲ ಪಕ್ಷ ಸೇರ್ಪಡೆಯಾಗಿದ್ದಾರೆ. 2008ರಲ್ಲಿ ಜೆಡಿಎಸ್ ಶಾಸಕರಾಗಿ ದಿನಕರ್ ಶೆಟ್ಟಿ ಆಯ್ಕೆ ಆಗಿದ್ದರು.ಮಾಜಿ ಶಾಸಕಿ ಪರಿಮಳ ನಾಗಪ್ಪ ಕೂಡ ಜೆಡಿಎಸ್‍ಗೆ ಗುಡ್‍ಬೈ ಹೇಳಿ ಬಿಜೆಪಿ ಸೇರಲಿದ್ದಾರೆ. ಮಾರ್ಚ್ 16ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಯಡಿಯೂರಪ್ಪ ಸಮ್ಮುಖದಲ್ಲಿ ಪರಿಮಳ ನಾಗಪ್ಪ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಚಾಮರಾಜನಗರದಲ್ಲಿ ಪ್ರಭಾವಿ ನಾಯಕಿಯಾಗಿರುವ ಪರಿಮಳ ನಾಗಪ್ಪ ಹನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ.Sign in to your account
Username or Email Address


Password

 Remember Me


