ಬಾಗಲಕೋಟೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಇಂದು ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದ ಪ್ರತಿಭಟನಾ ಸಮಾವೇಶದ ವೇದಿಕೆಯಲ್ಲಿ ಅಸ್ವಸ್ಥರಾಗಿ ಸುಸ್ತಾದಂತೆ ಕಂಡುಬಂದರು.ಇಂದು ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಕ್ರಮ ಖಂಡಿಸಿ, ಹುನಗುಂದ ತಾಲೂಕು ಕಾಂಗ್ರೆಸ್ ಕರೆ ನೀಡಿದ್ದ ಪ್ರತಿಭಟನಾ ಸಮಾವೇಶದಲ್ಲಿ ಉಮಾಶ್ರೀ ಅವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಉಮಾಶ್ರೀ ಅಸ್ವಸ್ಥರಾಗುತ್ತಿದ್ದಂತೆ ಶಾಸಕ ವಿಜಯಾನಂದ್ ಕಾಶಪ್ಪನವರ್ ಹಾಗೂ ಕಾಂಗ್ರೆಸ್ ಮುಖಂಡರು ಅವರನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ರು.ಉಮಾಶ್ರೀ ಅವರಿಗೆ ಯಾವುದೇ ತೊಂದರೆಯಿಲ್ಲ, ವಿಶ್ರಾಂತಿ ಅಗತ್ಯವಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಕುಸುಮಾ ಮಾಗಿ ಹೇಳಿದ್ದಾರೆ. Sign in to your account
Username or Email Address


Password

 Remember Me


