ಹಾಸನ: 2024ರ ಲೋಕಸಭಾ ಚುನಾವಣಾ (Lok Sabha Elections) ದೃಷ್ಟಿಯಿಂದ ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.ಹಾಸನದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ (Cauvery Issue) ಸರ್ಕಾರ ಆರಂಭಿಕ ಹಂತದಲ್ಲೇ ಮುಗ್ಗರಿಸಿದೆ. ಟ್ರಿಬ್ಯೂನಲ್ (ನ್ಯಾಯಾಧಿಕರಣ) ಮುಂದೆ ನೀರಿಲ್ಲ ಅನ್ನುತ್ತಾರೆ, ಹೊರಗೆ ಬಂದು ಒಳಹರಿವು 10,000 ಕ್ಯೂಸೆಕ್ ಇದೆ ಅಂತ ಹೇಳ್ತಿದ್ದಾರೆ. CWRC ತೀರ್ಪು ಬರುವ ಮುಂಚೆಯೇ ಒಳಹರಿವಿನ ಬಗ್ಗೆ ಹೇಳ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾಪತ್ತೆಯಾದ ಯುವಕನ ಪತ್ತೆ ಮಾಡಿದ ಸಾಕುನಾಯಿ- ಗ್ರಾಮಸ್ಥರಿಂದ ಇಬ್ಬರ ಮೆರವಣಿಗೆನೀರಾವರಿ ಸಲಹಾ ಸಮಿತಿ ಸಭೆ ಕರೆಯದೇ ತಮಿಳುನಾಡಿಗೆ ನೀರು ಹರಿಸಿದ್ದಾರೆ. ತಮಿಳುನಾಡಿನವರಿಗೆ ಕೀ ಕೊಟ್ಟು ಇವರು ಏನು ತೀರ್ಮಾನ ಮಾಡ್ತಾರೆ? ಕುಡಿಯಲು ನೀರಿಲ್ಲ ಎಂದು ಜನ ದಂಗೆ ಏಳುತ್ತಿದ್ದಾರೆ. 4 ತಿಂಗಳು ಗ್ಯಾರಂಟಿ ಕೊಡಲು ಹೋಗಿ ನೀರು ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಲ್ಲ ಕಡೆ ಗ್ಯಾರಂಟಿ ಕೊಡಲು ಲಕ್ಷಾಂತರ ಜನರನ್ನ ಸೇರಿಸಿ ಸರ್ಕಾರದ ಹಣ ಖರ್ಚು ಮಾಡಿದ್ದಾರೆ. ಆದ್ದರಿಂದ ರಾಜ್ಯದ ಹಿತದೃಷ್ಟಿಯಿಂದ, ನೆಲ-ಜಲಕ್ಕೋಸ್ಕರ ಯಾವುದೇ ಸಂಘಟನೆ ಬಂದ್ ಮಾಡಿದ್ರು ನಮ್ಮ ಬೆಂಬಲ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ – ಸಾತೇರಿ ದೇವಿ ಮೂರ್ತಿಗೆ ಉಡಿಸಿದ ಸೀರೆ 1.06 ಲಕ್ಷ ರೂ.ಗೆ ಹರಾಜುಅಲ್ಲದೇ 135 ಶಾಸಕರು ಸಾಕಾಗಲ್ಲ ಅಂತ ಕೆಲವು ಪಕ್ಷಗಳ ಮುಖಂಡರನ್ನ ಸೆಳೆಯುವಲ್ಲಿ ಕೆಲವರು ಮಗ್ನರಾಗಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಬೇರೆ ಪಕ್ಷದವರನ್ನು ಸೆಳೆಯುತ್ತಿದ್ದಾರೆ. ಮುಂದಿನ ಚುನಾವಣೆವರೆಗೂ ಕರ್ನಾಟಕ ಸರ್ಕಾರ, ತಮಿಳುನಾಡಿನ ಸರ್ಕಾರದ ಪಾದಕ್ಕೆ ರಾಜ್ಯವನ್ನ ಅಡ ಇಟ್ಟಿದ್ದಾರೆ. ತಮಿಳುನಾಡು ಸರ್ಕಾರ ಕರ್ನಾಟಕದಲ್ಲಿ ನೀರಿನ ವಿಚಾರದಲ್ಲಿ `ಆಪರೇಷನ್ ಐಎನ್‌ಡಿಐಎ’ ಮಾಡುತ್ತಿದೆ. ಇದರಿಂದ ಕರ್ನಾಟಕದ ರೈತರ ಮನೆ ಹಾಳಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರ ಜೊತೆ ಸೇರಿದರೂ ನಮ್ಮ ಸಿದ್ಧಾಂತ ಬಿಡಲ್ಲ. ಕಾಂಗ್ರೆಸ್‌ನವರು ಬೇಕಾದಾಗ ನಮ್ಮ ಹತ್ರ ಕೋಮುವಾದಿ ದೂರ ಇಡಬೇಕು ಅಂತ ಬರ್ತಾರೆ. ಅಧಿಕಾರ ಬಂದ ಮೇಲೆ ನಮ್ಮನ್ನ ಯಾವ ರೀತಿ ಟ್ರೀಟ್ ಮಾಡ್ತಿದ್ದಾರೆ ಎಂದು ಸಮಯ ಬಂದಾಗ ಹೇಳ್ತಿನಿ ಎಂದು ಹೇಳಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


