ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿಂದು (Male Mahadeshwara Hills) ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 37 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಶ್ರೀ ಮಲೆ ಮಹದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನವ ಜೋಡಿಗೆ ಶುಭ ಕೋರಿದೆ. pic.twitter.com/uPveHxEmQt— Siddaramaiah (@siddaramaiah) September 27, 2023ಮಲೆಮಹದೇಶ್ವರನ ತಪೋ ಭೂಮಿಯಲ್ಲಿ 37 ಮಂದಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನವಜೋಡಿಗಳಿಗೆ ಮಂಗಳಸೂತ್ರ ವಿತರಿಸಿ ಶುಭ ಹಾರೈಸಿದರು‌. ಇದನ್ನೂ ಓದಿ: ಸ್ವದೇಶಿ ಆಯುಧ ನಿರ್ಮಾಣ ತಂತ್ರಜ್ಞಾನದಲ್ಲಿ ಭಾರತದ ಸಾಧನೆ; ಶತ್ರುಗಳ ನಿದ್ದೆಗೆಡಿಸಲಿದೆ ಧ್ರುವಾಸ್ತ್ರಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸಾಲ ಮಾಡಿ ಅದ್ಧೂರಿ ಮದುವೆ (Marriage) ಮಾಡುವುದು ಅನಾರೋಗ್ಯಕಾರಿ. ಮೊದಲು ವ್ಯವಸಾಯಕ್ಕೆಂದು ಸಾಲ ಮಾಡಿ, ಮದುವೆ ಮಾಡುವುದನ್ನ ನಿಲ್ಲಿಸಿ ಎಂದು ಕರೆ ನೀಡಿದರು.ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ಧೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದು ಹೇಳಿದರು. ಇದನ್ನೂ ಓದಿ: ಈಶಾನ್ಯ ರಾಜ್ಯವನ್ನು ‘ಯುದ್ಧಭೂಮಿಯಾಗಿ’ ಪರಿವರ್ತಿಸಲಾಗಿದೆ: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿಮಹದೇಶ್ವರನ ಬೆಟ್ಟ ಆಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ಧೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಮುಂದಿನ 5 ವರ್ಷಗಳಲ್ಲಿ ಮಲೆ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದ ಸಿಎಂ, ಇಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರಪತಿ ಭವನ ಇನ್ಮುಂದೆ ತಪೋಭವನ: ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಹದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು, ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯ ಸಲಹೆಯಂತೆ ತಪೋ ಭವನ ಎಂದು ಬದಲಾಯಿಸಿದ್ದೇವೆ ಎಂದು ಹೇಳಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


