ಬೆಂಗಳೂರು: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ (D K Shivakumar) ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎನ್ನುವ ಸಂಸದ ಸುಧಾಕರ್ (Dr K Sudhakar) ಅವರ ಹೇಳಿಕೆಯ ಬಗ್ಗೆ ಕೇಳಿದಾಗ, ಕೆ.ಸುಧಾಕರ್ ಅವರು ಸವಾಲು ಹಾಕಿದ್ದಾರೆ. ಈ ಸವಾಲನ್ನು ನಾನು ಪ್ರೀತಿ, ಗೌರವಗಳಿಂದ ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದು ಭಾವಿಸುತ್ತೇನೆ. ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ ಎಂದರು. ಇದನ್ನೂ ಓದಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಹರಿದ ಕಾರು – 10 ಮೀಟರ್ ಎಳೆದೊಯ್ದು ಚಾಲಕ ಎಸ್ಕೇಪ್!ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಭೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ ಎಂದರು.  ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾನು ಸಿಎಂ‌ ಆಗ್ತೀನಿ, ಸೀನಿಯಾರಿಟಿ ಬೇಕಿಲ್ಲ: ಎಂ.ಬಿ ಪಾಟೀಲ್‌ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಅನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು ಎಂದು ಹೇಳಿದರು.  ಇದನ್ನೂ ಓದಿ: ಮಡಿಕೇರಿಯಲ್ಲಿ ಶ್ರೀಮಂತ ಗಣಪ ಮತ್ತಷ್ಟು ಸಿರಿವಂತ!ಇನ್ನು ಒಂದು ತಿಂಗಳಲ್ಲಿ ಕೋವಿಡ್ ವರದಿಯನ್ನು ನೀಡುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವ ಕಾರಣಕ್ಕೆ ಸುಧಾಕರ್ ಅವರು ನಿಮ್ಮನ್ನು ಪದೇಪದೇ ಹೊಗಳುತ್ತಿದ್ದಾರೆಯೇ ಎಂದು ಕೇಳಿದಾಗ, ನನಗೆ ಕೋವಿಡ್ ವರದಿಯ ಬಗ್ಗೆ ಏನು ಗೊತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಾನು ಭಾಗವಹಿಸಿರಲಿಲ್ಲ. ಸಕಲೇಶಪುರದ ಎತ್ತಿನಹೊಳೆಯಲ್ಲಿದ್ದೆ ಎಂದರು.  ಇದನ್ನೂ ಓದಿ: 500 ಮೀಟರ್ ಓಡಿ ರೈಲ್ವೆ ದುರಂತ ತಪ್ಪಿಸಿದ ನಿರ್ವಾಹಕಸುಧಾಕರ್ ಈಗ ಎಂಪಿ ಅಲ್ಲವೇ?
ಮಾತಿನ ಮಧ್ಯೆ ಡಿಸಿಎಂ ಅವರು, ಸುಧಾಕರ್ ಈಗ ಎಂಪಿ ಅಲ್ಲವೇ? ಎಂದು ಮಾಧ್ಯಮದವರ ಬಳಿ ಪ್ರಶ್ನಿಸಿದರು. ನಮ್ಮಲ್ಲಿ ಇಬ್ಬರು ಸುಧಾಕರ್ ಇದ್ದಾರೆ. ಇವರೂ ಸೇರಿ ಮೂರು ಜನ ಆಗುತ್ತಾರೆ. ನಮ್ಮವರು ಇಬ್ಬರೂ ಮಂತ್ರಿಗಳು. ಇವರು ಸಂಸದರು ಎಂದಾಗ, ಮಾಧ್ಯಮದವರು ‘ಮಾಜಿ ಸಚಿವರು ಆಗಿದ್ದರು’ ಎಂದು ಹೇಳಿದಾಗ ಮಾಜಿ ಸಚಿವ ಸುಧಾಕರ್ ಎಂದರು.  ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ರೈಲು – ತಪ್ಪಿದ ಭಾರೀ ಅನಾಹುತಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಿಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು ಎಂದು ಹೇಳಿದರು.  ಇದನ್ನೂ ಓದಿ: ರಷ್ಯಾ ವಿರುದ್ಧ ಉಕ್ರೇನ್‌ ಪ್ರತೀಕಾರದ ದಾಳಿ – ಬೆಂಕಿ ಉಂಡೆ ಉಗುಳುವ ʻಡ್ರ್ಯಾಗನ್‌ ಡ್ರೋನ್‌ʼ ಅಸ್ತ್ರ ಪ್ರಯೋಗSign in to your account
Username or Email Address


Password

 Remember Me


