ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದಾಗ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ (Tarikere) ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಹಾಗೂ ಧನುಷ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ಕೊನೆಗೂ ಸಿಕ್ತು ಟಿವಿ ಭಾಗ್ಯಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ.ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ (Mcgann) ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಇನ್ನಿತರ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿ: ಕೀನ್ಯಾ ಶಾಲೆಯಲ್ಲಿ ಅಗ್ನಿ ಅವಘಡ – 17 ಮಕ್ಕಳು ದಾರುಣ ಸಾವುಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರವಾದ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


