ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಅಶೋಕ ಸಿದ್ದಾಪುರ ಗ್ರಾಮದ ಬಳಿ ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಆಟೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, 11 ಜನರಿಗೆ ಗಾಯಗೊಂಡಿದ್ದಾರೆ.ಗಂಗಮ್ಮ (34) ಮತ್ತು ಚಿರಂಜೀವಿ (28) ಮೃತ ದುರ್ದೈವಿಗಳು. ಆಟೋದಲ್ಲಿ 13 ಜನರು ಪ್ರಯಾಣಿಸುತ್ತಿದ್ದು, ಉಳಿದ 11 ಜನರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ರಾಂಪುರದಿಂದ ಮೊಳಕಾಲ್ಮೂರಿಗೆ ತೆರಳುತ್ತಿತ್ತು.ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. Sign in to your account
Username or Email Address


Password

 Remember Me


