ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ತಮ್ಮ ಸ್ವಕ್ಷೇತ್ರವಾದ ಶಿಕಾರಿಪುರವನ್ನು ಮಗ ಬಿ.ವೈ. ರಾಘವೇಂದ್ರ ಅವರಿಗೆ ಬಿಟ್ಟು ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.ಬಿಎಸ್‍ವೈ ತಾವು ಮುಂದಿನ ಚುನಾವಣೆಗಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಅಥವಾ ಬಿಜೆಪಿಯ ಭದ್ರಕೋಟೆಯಾಗಿರುವ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದತ್ತ ಕಣ್ಣು ಹಾಕಿದ್ದಾರೆ. ಈ ಕುರಿತು ಅವರು ಈಗಾಗಲೇ ಆಪ್ತರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.ಶಿವಮೊಗ್ಗ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಹಿಡಿತ ಸಾಧಿಸಲು ಬಿಎಸ್ ವೈ ಮಾಸ್ಟರ್ ಪ್ಲಾನ್ ಮಾಡಿದ್ದು ಮಾಜಿ ಸಚಿವ ಕುಮಾರ್ ಬಂಗಾರಪ್ಪಗೆ ಬಿಜೆಪಿಯಿಂದ ಎಂಪಿ ಟಿಕೆಟ್ ನೀಡುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿಸುವ ಸಾಧ್ಯತೆಗಳಿವೆ. ಅದಕ್ಕಾಗಿ ಈಗಾಗಲೇ ಕುಮಾರ್ ಬಂಗಾರಪ್ಪ ಅವರ ಜೊತೆ ಎರಡು ಸುತ್ತಿನ ಮಾತುಕತೆ ನಡೆಸಿರುವ ಬಿಎಸ್‍ವೈ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.ಕುಮಾರ್ ಬಂಗಾರಪ್ಪ ಬಿಜೆಪಿಗೆ ಬಂದರೆ ಸೊರಬ ಕ್ಷೇತ್ರದಿಂದ ಟಿಕೆಟ್ ನೀಡುವುದು ಅಥವಾ ಸಂಸದ ಎಲೆಕ್ಷನ್ ಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ನೀಡಬಹುದು ಎಂದು ಬಿಎಸ್‍ವೈ ಲೆಕ್ಕಾಚಾರ ಹಾಕಿದ್ದಾರೆ. ಆದ್ರೆ ಯಡಿಯೂರಪ್ಪ ಅವರ ಭರವಸೆಗೆ ಯೋಚನೆ ಮಾಡ್ತಿನಿ ಅಂತಾ ಇತ್ತ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. Sign in to your account
Username or Email Address


Password

 Remember Me


