ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ ಮಾಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.ಯಲಬುರ್ಗಾ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್‍ರ ಕಟೌಟ್‍ಗೆ ಕೆಲ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಆಕ್ರೋಶಗೊಂಡ ಜನರು ಟಿಪ್ಪು ಸುಲ್ತಾನ ವೃತ್ತದಿಂದ ತಹಶೀಲ್ದಾರ್ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದರು. ಆದರೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಒಪ್ಪಿಗೆ ನೀಡದಕ್ಕೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯ ಕಲೆ ಸಮಯ ಮಾತಿನ ಚಕಮಕಿ ಸಹ ನಡೆಯಿತು.ಪ್ರತಿಭಟನೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸ್ಥಳದಲ್ಲಿ ಟಿಪ್ಪುಸುಲ್ತಾನ ಅಭಿಮಾನಿಗಳು ಧರಣಿ ನಡೆಸುತ್ತಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. Sign in to your account
Username or Email Address


Password

 Remember Me


