ಮೈಸೂರು: ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಸುದ್ದಿಯಾದ ಬೆನ್ನಲ್ಲೇ ಇದೀಗ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾಮುಕನೊಬ್ಬ ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಜಿಲ್ಲೆಯ ಚಾಮುಂಡಿ ಬೆಟ್ಟದ ನಂದಿ ಬಳಿ ಸೋಮವಾರ ಸಂಜೆ ಈ ಘಟನೆ ನಡೆದಿದೆ. ಜರ್ಮನಿ ದೇಶದ ಮಹಿಳೆ ಪ್ರವಾಸಕ್ಕಾಗಿ ಚಾಮುಂಡಿ ಬೆಟ್ಟಕ್ಕೆ ಬಂದಿದ್ದು, ಬೆಟ್ಟದಿಂದ ಮೆಟ್ಟಿಲುಗಳನ್ನು ಇಳಿದುಕೊಂಡು ಬರುತ್ತಿದ್ದ ವೇಳೆ ಕಾಮುಕ ಮಹಿಳೆಯ ತುಟಿ ಹಾಗೂ ಮೈ ಕಚ್ಚಿದ್ದಾನೆ. ಮಾತ್ರವಲ್ಲದೇ ಅವರ ಬಳಿಯಿದ್ದ 2,500 ರೂ. ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.ಈ ಬಗ್ಗೆ ಕೆ.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸ್ರು ಬಲೆ ಬೀಸಿದ್ದಾರೆ.Sign in to your account
Username or Email Address


Password

 Remember Me


