ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ರಾಜಾನುಕುಂಟೆಯಲ್ಲಿ ನಡೆದಿದೆ.25 ವರ್ಷದ ಸುಶೀಲ ಕೊಲೆಯಾದ ದುರ್ದೈವಿ. ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಕೋಟೆಯಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಸುಶೀಲಾ ಗಂಡನಾದ 35 ವರ್ಷದ ಸತೀಶ್, ಹೆಂಡತಿಯ ಮೇಲಿನ ಅನುಮಾನದಿಂದ ಆಕೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಆರೋಪಿ ಸತೀಶ್‍ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.ಮೃತ ಸುಶೀಲ ಮನೆ ಕೆಲಸ ಮಾಡುತ್ತಿದ್ದು, ಸತೀಶ್ ಗಾರೆ ಕೆಲಸಕ್ಕೆ ಹೋಗುತ್ತಿದ್ದ. ಈ ದಂಪತಿಗೆ 6 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.ಘಟನೆ ಕುರಿತು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


