ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಇಬ್ಬರು ಮಕ್ಕಳಿಗೆ ಕಡಿದು ಗಂಭೀರ ಗಾಯಗೊಳಿಸಿದೆ.6 ವರ್ಷದ ಅಜಯ್ ಮತ್ತು 4 ವರ್ಷದ ಕಾವೇರಿ ಹುಚ್ಚು ನಾಯಿ ಕಡಿತಕ್ಕೊಳಗಾಗಿರುವ ಮಕ್ಕಳು. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿದ ಹುಚ್ಚುನಾಯಿ ಸಿಕ್ಕಸಿಕ್ಕಲ್ಲಿ ಕಚ್ಚಿ ಗಾಯಗೊಳಿಸಿದೆ. ಅಜಯ್‍ನ ಕುತ್ತಿಗೆ ಭಾಗಕ್ಕೆ ಬಲವಾಗಿದೆ ಕಚ್ಚಿದೆ. ಕಾವೇರಿಯ ತಲೆ ಹಾಗೂ ಮುಖಕ್ಕೆ ಕಚ್ಚಿದ್ದು ಮಕ್ಕಳ ಸ್ಥಿತಿ ಗಂಭೀರವಾಗಿದೆ.ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಇಬ್ಬರನ್ನೂ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಹುಚ್ಚುನಾಯಿ ಗ್ರಾಮದ ಸುತ್ತಮುತ್ತ ಇನ್ನೂ ಓಡಾಡಿಕೊಂಡಿದ್ದು ಗ್ರಾಮದ ಜನರು ಭಯಭೀತರಾಗಿದ್ದಾರೆ. ತಕ್ಷಣ ಸಂಬಂಧಪಟ್ಟವರು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. Sign in to your account
Username or Email Address


Password

 Remember Me


