ಮಂಡ್ಯ: ಶಾಲಾ ಮಕ್ಕಳನ್ನ ಕರೆದುಕೊಂಡು ಹೋಗುತ್ತಿದ್ದ ಆಟೋ ಪಲ್ಟಿಯಾಗಿ 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಮಂಡ್ಯದ ಕೆಆರ್ ಪೇಟೆಯಲ್ಲಿ ನಡೆದಿದೆ.ತಾಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಆಟೋ ಉರುಳಿ ಬಿದ್ದಿದೆ. ಇಂದು ಪಟ್ಟಣದ ಸರ್ಕಾರಿ ಶತಮಾನದ ಶಾಲೆಗೆ ಮಕ್ಕಳನ್ನ ಆಟೋದಲ್ಲಿ ಕರೆದುಕೊಂಡು ಬರಲಾಗುತ್ತಿತ್ತು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಕಿದ್ದ ಹುಲ್ಲು ಆಟೋದ ಹಿಂಭಾಗದ ಚಕ್ರಕ್ಕೆ ಸಿಲುಕಿಕೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಹಳ್ಳಕ್ಕೆ ಉರಳಿ ಬಿದ್ದಿದೆ. ಇದ್ರಿಂದ ಆಟೋದಲ್ಲಿದ್ದ 20 ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದೆ.ಆಟೋ ಉರುಳಿಬಿದ್ದ ತಕ್ಷಣ ಭಯದಿಂದ ಮಕ್ಕಳು ಕಿರುಚಿಕೊಂಡಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಗಾಯಗೊಂಡ ಮಕ್ಕಳನ್ನ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಮಕ್ಕಳಿಗೆ ಕೆಆರ್ ಪೇಟೆ ಪಟ್ಟಣ್ಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.Sign in to your account
Username or Email Address


Password

 Remember Me


