ಬೆಂಗಳೂರು: ಪ್ರಾದೇಶಿಕ ವಿಚಾರ ಬಂದಾಗ ಪತ್ರಕರ್ತ ಪಕ್ಷಪಾತಿ ಆಗಿರುವುದರಲ್ಲಿ ತಪ್ಪಿಲ್ಲ ಎಂದು ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ದ್ವಾರಕನಾಥ್ ಹೇಳಿದ್ದಾರೆ.ಪಬ್ಲಿಕ್ ಟಿವಿಯ 5ನೇ ವರ್ಷದ ಸಂಭ್ರಮದಲ್ಲಿ ಆಯೋಜನೆಗೊಂಡ ಸ್ಪೆಷಲ್ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವಾಗಲೂ ಒಂದೇ ರೀತಿ ಇರಬಾರದು. ಸಂಪ್ರದಾಯವನ್ನು ಬ್ರೇಕ್ ಮಾಡಬೇಕು. ರಾಜಕಾರಣಿಗಳ ಜೊತೆ ಮಾತನಾಡಲು ಜನಸಾಮಾನ್ಯರಿಗೆ ಆಗುವುದಿಲ್ಲ. ಹೀಗಾಗಿ ಬುಲೆಟಿನ್ ನಲ್ಲಿ ಅಕ್ರೋಶ ಹೊರ ಹಾಕಿದರೆ ತಪ್ಪೇನು ಆಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.ಚೌಕಟ್ಟು ಒಳಗಡೆ ನೈತಿಕ ಆಕ್ರೋಶಕ್ಕೆ ಯಾವುದೇ ಅಜೆಂಡಾ ಇರುವುದಿಲ್ಲ. ಆದಿವಾಸಿಗಳು ಮತ್ತು ಬಡವರ ಸಮಸ್ಯೆಗಳನ್ನು ಬಿಂಬಿಸಿ ಅವರ ಕಷ್ಟಕ್ಕೆ ವಾಹಿನಿಗಳಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ನಾನು ಬಿಗ್ ಬುಲೆಟಿನ್ ಹೆಡ್‍ಲೈನ್ ನೋಡಿ ಮಲಗುತ್ತೇನೆ. ಪಬ್ಲಿಕ್ ಹೀರೋ ನಿಜವಾಗಿಯೂ ಉತ್ತಮ ಕಾರ್ಯಕ್ರಮ. ಪ್ರತಿ ದಿನ ಒಬ್ಬೊಬ್ಬ ಹೀರೋವನ್ನು ಗುರುತಿಸುವುದು ಕಷ್ಟದ ಕೆಲಸ ಎಂದು ಹೇಳಿದರು.ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ರಂಗನಾಥ್, ಪ್ರಜಾಪ್ರಭುತ್ವದಲ್ಲಿ ನಾವು ಪ್ರಶ್ನಾತೀತರಲ್ಲ. ನಾವು ಹೇಗೆ ಪ್ರಶ್ನೆ ಮಾಡುತ್ತೇವೋ ಅದೇ ರೀತಿಯಾಗಿ ನಮ್ಮನ್ನು ಜನ ಪ್ರಶ್ನೆ ಮಾಡಬೇಕು. ಇಲ್ಲಿ ಪಬ್ಲಿಕ್ ಟಿವಿಯನ್ನು ಹೊಗಳಿ ಮಾತನಾಡಬಾರದು, ನಮ್ಮ ತಪ್ಪುಗಳನ್ನು ತೋರಿಸಿ ಟೀಕಿಸಬೇಕು ಎಂದು ಅತಿಥಿಗಳನ್ನು ಕೇಳಿಕೊಂಡಿದ್ದರು.ಸಂವಾದದ ಕೊನೆಯಲ್ಲಿ ಎಲ್ಲ ಅತಿಥಿಗಳ ಪ್ರಶ್ನೆಗೆ ಉತ್ತರಿಸಿದ ರಂಗನಾಥ್, ನಿಮ್ಮೆಲ್ಲರ ಸಲಹೆಯನ್ನು ಪರಿಗಣಿಸಿದ್ದೇನೆ. ನಾಳೆಯಿಂದಲೇ ನಿಮ್ಮ ಸಲಹೆಗಳು ಜಾರಿ ಆಗುತ್ತದೆ ಎಂದು ಹೇಳಲಾರೆ. ಆದರೆ ಮುಂದಿನ ದಿನಗಳಲ್ಲಿ ನೀವು ಪಬ್ಲಿಕ್ ಟಿವಿಯಲ್ಲಿ ಬದಲಾವಣೆಯನ್ನು ಕಾಣಲಿದ್ದೀರಿ ಎಂದು ತಿಳಿಸಿದರು.ಈ ವಿಶೇಷ ಕಾರ್ಯಕ್ರಮದಲ್ಲಿ ಮಾಜಿ ಅಡ್ವೋಕೇಟ್ ಜನರಲ್ ಬಿವಿ ಆಚಾರ್ಯ, ಹಿರಿಯ ಪತ್ರಕರ್ತ ಸತ್ಯನಾರಾಯಣ, ನಟ ಮುಖ್ಯಮಂತ್ರಿ ಚಂದ್ರು, ಹಿರಿಯ ನಟಿ ಅರುಂಧತಿ ನಾಗ್, ನಿವೃತ್ತ ಡಿಜಿ, ರೇವಣ ಸಿದ್ದಯ್ಯ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್, ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ಭುಜಂಗ ಶೆಟ್ಟಿ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ದ್ವಾರಕನಾಥ್, ಬಿಜೆಪಿ ಮುಖಂಡ ಅಶ್ವತ್ಥ ನಾರಾಯಣ, ಉತ್ತರ ಕರ್ನಾಟಕನಿವಾಸಿಗಳ ಸಂಘದ ಅಧ್ಯಕ್ಷ ಚಂದ್ರೇಶಖರ್ ಸಾಂಬ್ರಾಣಿ, ಮಹಿಳಾ ಹೋರಾಟಗಾರ್ತಿ ವಿಮಲಾ ಅತಿಥಿಗಳಾಗಿ ಭಾಗವಹಿಸಿದ್ದರು.Sign in to your account
Username or Email Address


Password

 Remember Me


