ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ತೊರೆದ ಹಿರಿಯ ಮುಖಂಡ ಎಸ್‍ಎಂ ಕೃಷ್ಣ ಬಿಜೆಪಿ ಸೇರೋ ಬಗ್ಗೆ ಈ ಹಿಂದೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಈಗ ಉಲ್ಟಾ ಹೊಡೆದಿದ್ದಾರೆ. ಎಸ್‍ಎಂಕೆ ಬಿಜೆಪಿ ಸೇರುವುದು ಖಚಿತವಿಲ್ಲ ಎಂದು ಬಿಎಸ್‍ವೈ ಹೇಳಿದ್ದಾರೆ.ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಬಿಎಸ್‍ವೈ, ಇದರ ಬಗ್ಗೆ ಇನ್ನೂ ಅಧಿಕೃತವಾಗಿಲ್ಲ. ಅವರು ಯಾವಾಗ ತೀರ್ಮಾನ ತೆಗೆದುಕೊಳ್ತಾರೋ ಗೊತ್ತಿಲ್ಲ. ಕೃಷ್ಣರನ್ನು ನಾನಂತೂ ಭೇಟಿಯಾಗಿಲ್ಲ ಅಂದ್ರು.ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮುಂದುವರಿಕೆ ವಿಚಾರವಾಗಿ ಮಾತನಾಡಿದ ಬಿಎಸ್‍ವೈ, ಈಶ್ವರಪ್ಪ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇಬ್ಬರೂ ಅಣ್ಣ ತಮ್ಮಂದಿರಾಗಿ ಒಟ್ಟಾರೆ ಕೆಲಸ ಮಾಡ್ತಿದ್ದೀವಿ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನ ಅಧಿಕಾರಕ್ಕೆ ತರುವ ಪ್ರಯತ್ನ ಮಾಡ್ತಿದ್ದೀವಿ ಅಂದ್ರು.Sign in to your account
Username or Email Address


Password

 Remember Me


