ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಸ್ಕಿ ಮಲ್ಲಿಕಾರ್ಜುನ ದೇವರ ಜಾತ್ರೆಗೆ ಮಹಾ ರಥೋತ್ಸವದೊಂದಿಗೆ ವಿದ್ಯುಕ್ತ ತೆರೆಎಳೆಯಲಾಗಿದೆ.ಗಚ್ಚಿನ ಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮಿಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಮಹಾ ಅಭಿಷೇಕ, ರಥಕ್ಕೆ ಕಳಸಾವರೋಹಣ ವೇಳೆ ಭಕ್ತರು ದಿಂಡಿನ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಿಸಿದರು. ಬೃಹದಾಕಾರದ ಅತ್ಯಂತ ಹಳೆಯದಾದ ಕಲ್ಲಿನ ರಥವನ್ನ ಸಾವಿರಾರು ಭಕ್ತರು ಎಳೆದು ಪುನೀತರಾದರು. ಭಕ್ತಿಭಾವದಿಂದ ರಥಕ್ಕೆ ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.ರಥೋತ್ಸವದಲ್ಲಿ ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ದೇವಸ್ಥಾನ ಸಮಿತಿ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಭಕ್ತರು ಅದ್ಧೂರಿ ಜಾತ್ರೆಯ ಯಶಸ್ಸಿಗೆ ಸಾಕ್ಷಿಯಾದರು.   Sign in to your account
Username or Email Address


Password

 Remember Me


