ಬೆಂಗಳೂರು: ಬರಹಗಾರ ಅಗ್ನಿ ಶ್ರೀಧರ್‍ಗೆ ಲಘು ಹೃದಯಾಘಾತವಾಗಿದ್ದು, ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಡಬಗೆರೆ ಶ್ರೀನಿವಾಸ್ ಹತ್ಯೆ ಸಂಚು ಕೇಸ್‍ನಲ್ಲಿ ರೌಡಿ ಶೀಟರ್ ರೋಹಿತ್ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ ಇಸ್ರೋ ಲೇಔಟ್‍ನಲ್ಲಿರುವ ಅಗ್ನಿ ಶ್ರೀಧರ್ ಮನೆಯ ಮೇಲೆ ಮಂಗಳವಾರ ಬೆಳಗ್ಗೆ ಪೊಲೀಸರು ದಾಳಿ ನಡೆಸಿ ಶೋಧ ಆರಂಭಿಸಿದ್ದರು.ಬೆಳಗ್ಗೆಯಿಂದ ಪೊಲೀಸರ ವಿಚಾರಣೆ ಉತ್ತರಿಸುತ್ತಿದ್ದ ಅಗ್ನಿ ಶ್ರೀಧರ್‍ಗೆ ಮಧ್ಯಾಹ್ನ 3.30ರ ವೇಳೆಗೆ ಲಘು ಹೃದಯಾಘಾತಕ್ಕೆ ತುತ್ತಾದರು. ಕೂಡಲೇ ಅವರನ್ನು ಅಂಬುಲೆನ್ಸ್ ನಲ್ಲಿ ಸಮೀಪದಲ್ಲಿದ್ದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಯಿತು.ಎಪಿಎಂಸಿ ಅಧ್ಯಕ್ಷ ಕಡಬಗೆರೆ ಸೀನ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಬಲಗೈ ಬಂಟ ಸತೀಶ್ ಬಂಧನವಾಗಿತ್ತು. ವಿಚಾರಣೆ ವೇಳೆ ಸತೀಶ್ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಗ್ನಿ ಶ್ರೀಧರ್ ಮನೆಯಲ್ಲಿ ಇರುವುದಾಗಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.ಕೋರ್ಟ್‍ನಿಂದ ಸರ್ಚ್ ವಾರೆಂಟ್ ಪಡೆದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಡಿಸಿಪಿಗಳಾದ ಹರ್ಷ, ನಾರಾಯಣ್, ಶರಣಪ್ಪ, ಅನುಚೇತ್ ನೇತೃತ್ವದಲ್ಲಿ ಪೊಲೀಸರು ಇಂದು ಫೀಲ್ಡಿಗೆ ಇಳಿದು ಶೋಧ ಆರಂಭಿಸಿದ್ದರು.Sign in to your account
Username or Email Address


Password

 Remember Me


