ರಾಯಚೂರು: ಕಟ್ಟಿಗೆ ಅಡ್ಡೆಗೆ ಬೆಂಕಿ ತಗುಲಿ ಸುಮಾರು 15 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.ಬಸವರಾಜ್ ಎಂಬವರ ಕುಷ್ಟಗಿ ರಸ್ತೆಯಲ್ಲಿರುವ ಕಟ್ಟಿಗೆ ಅಡ್ಡೆ ಬೆಂಕಿಗೆ ಆಹುತಿಯಾಗಿದೆ. ಬಂಬೂ ಸೇರಿದಂತೆ ಹಲವು ಬಿದಿರಿನ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹತ್ತಿರಬಹುದು ಎಂದು ಶಂಕಿಸಲಾಗಿದೆ.
ಅಗ್ನಿಶಾಮಕ ದಳದ ಮೂರು ವಾಹನಗಳು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಡ್ಡೆಯಲ್ಲಿನ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
 Advertisement 



 






 Advertisement 




ಅಗ್ನಿಶಾಮಕ ದಳದ ಮೂರು ವಾಹನಗಳು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಡ್ಡೆಯಲ್ಲಿನ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Sign in to your account
Username or Email Address


Password

 Remember Me


