ಚಿಕ್ಕಮಗಳೂರು: ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಕಾಂಗ್ರೆಸ್ ಸೇರುವ ವಿಚಾರ ಹಾಗೂ ನಂಜನಗೂಡು ಟಿಕೆಟ್‍ಗೆ ಸಂಬಂಧಿಸಿದಂತೆ ಮಾಜಿ ಸಂಸದ ವಿಶ್ವನಾಥ್ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ವಿಶ್ವನಾಥ್‍ಗೆ ಇರುವ ಮಾನ-ಮರ್ಯಾದೆ ಹಂಚಿಕೊಳ್ಳೋಣ ಅಂತಾ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ನಾನು ಸಿಎಂ ಆಗಬೇಕೆಂಬ ಆಪೇಕ್ಷೆ ಜನಾರ್ದನ ಪೂಜಾರಿಯವರದ್ದೇ ವಿನಾಃ ನನ್ನದಲ್ಲ. ಮಾಜಿ ಸಿಎಂ ಎಸ್.ಎಂ.ಕೃಷ್ಣ ರಾಜೀನಾಮೆ ಹಿಂಪಡೆಯುವಂತೆ ನಾನು ಮತ್ತು ಇಂಧನ ಸಚಿವ ಡಿಕೆ ಶಿವಕುಮಾರ್ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದು, ರಾಷ್ಟ್ರೀಯ ನಾಯಕರು ಕೂಡ ಮಾತುಕತೆ ನಡೆಸುತ್ತಿದ್ದಾರೆ ಎಂದರು.ಉಗಾಂಡ ಯುವತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪ ಸಾಬೀತಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಪರಮೇಶ್ವರ್‍ಗೆ ಮಾನ ಮರ್ಯಾದೆ ಇಲ್ವಾ: ವಿಶ್ವನಾಥ್ ಪ್ರಶ್ನೆ


 Advertisement 







 Advertisement 




Sign in to your account
Username or Email Address


Password

 Remember Me


