ಬೆಂಗಳೂರು: ನನ್ನ ಸಹೋದರಿ ತೇಜಸ್ವಿನಿ ಧೈರ್ಯ ಮಾಡಿ ರಾಜಕೀಯದಲ್ಲಿ ಮುನ್ನುಗ್ಗಬೇಕು. ಅನಂತಕುಮಾರ್ ಅವರ ಜೊತೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವಿದೆ. ನೀವು ರಾಜಕೀಯಕ್ಕೆ ಬರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ತೇಜಸ್ವಿನಿ ಅನಂತಕುಮಾರ್ (Tejaswini Ananth Kumar) ಅವರನ್ನು ರಾಜಕೀಯಕ್ಕೆ ಆಹ್ವಾನಿಸಿದ್ದಾರೆ.ಅನಂತ ನಮನ-64 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೋ ಹಸುಗಳು ಹುಟ್ಟುತ್ತವೆ. ಆದರೆ ಎಲ್ಲವೂ ಬಸವ ಆಗಲು ಸಾಧ್ಯವಿಲ್ಲ. ನೀವು ಇಲ್ಲೇ ಅಡುಗೆ ಮನೆಯಲ್ಲಿ ಅದಮ್ಯ ಚೇತನದ ಜೊತೆಯಲ್ಲೇ ಇರಬೇಕಾಗುತ್ತದೆ. ನಿಮ್ಮ ಹಿಂದೆ ದೊಡ್ಡ ಪಡೆ ಇದೆ, ಸಮಾಜವಿದೆ. ಮುನ್ನುಗ್ಗಿ, ನಿಮ್ಮನ್ನು ನಂಬಿಕೊಂಡಿರುವ ಹಿಂಬಾಲಕರನ್ನು ರಕ್ಷಣೆ ಮಾಡಿ ಎಂದರು. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ; ದೇವೇಗೌಡರ ಸ್ಪರ್ಧೆಗೆ ಬಿಜೆಪಿ ಸಂಸದ ಬಸವರಾಜು ವಿರೋಧತೇಜಸ್ವಿನಿ ಅವರೇ ನೀವು ಮುನ್ನುಗ್ಗಬೇಕು. ಹೊಲವನ್ನು ಉಳುಮೆ ಮಾಡದಿದ್ದರೆ ಮಟ್ಟ ಆಗುವುದಿಲ್ಲ. ಶಿಲೆ ಶಿಲ್ಪಿ ಕೈಗೆ ಸಿಗದಿದ್ದರೆ ಕಲೆ ಅರಳುವುದಿಲ್ಲ. ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಕಾರಣಕ್ಕೆ ನೀವು ರಾಜಕಾರಣದಲ್ಲಿ ಇರಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: BJPಯ 25 ಮಂದಿ ಸಂಸದರು ದಂಡಪಿಂಡಗಳು: ಬಿ.ವಿ.ಶ್ರೀನಿವಾಸ್‌ನಿಮ್ಮ ಇತಿಹಾಸವನ್ನು ಯಾರೂ ಬದಲಾವಣೆ ಮಾಡಲು, ಮುಚ್ಚಿಹಾಕಲು ಆಗುವುದಿಲ್ಲ. ಒಳ್ಳೆಯ ಕೆಲಸ ಮಾಡಿ ನಿಮ್ಮದೇ ಆದ ಛಾಪನ್ನು ಮೂಡಿಸಿಕೊಂಡಿದ್ದೀರಿ. ನಿಮ್ಮ ಜೊತೆ ರಾಜಕೀಯ ಭಿನ್ನಾಭಿಪ್ರಾಯ ಇರಬಹುದು. ಆದರೆ ನಿಮ್ಮ ಬಳಿ ಮೃದು ಹೃದಯವಿದೆ. ಅನಂತಕುಮಾರ್ ಅವರು ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ. ನೀವು ಹೆಜ್ಜೆ ಗುರುತು ಮೂಡಿಸಿ ಎಂದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


