ಕಾರವಾರ: ಅನ್ಯ ಕೋಮಿನ ಯುವಕರಿಂದ ಶಿವ ದೇವಾಲಯದ ಅವಶೇಷಗಳನ್ನು ಕಲ್ಲಿನಿಂದ ಪುಡಿಮಾಡಿ ಫೇಸ್‍ಬುಕ್‍ನಲ್ಲಿ (Facebook) ಅಪ್‍ಲೋಡ್ ಮಾಡಿ ಕ್ರೌರ್ಯ ಮೆರೆದ ಘಟನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದ (Ramanagar) ನಾಗೋಡಾ ಕ್ರಾಸ್ ಬಳಿ ನಡೆದಿದೆ.ಜೋಯಿಡಾ ತಾಲೂಕಿನ ರಾಮನಗರದಲ್ಲಿ ಕಾಳಿನದಿಗೆ ಕಟ್ಟಲಾದ ಸೂಪಾ ಜಲಾಶಯದಲ್ಲಿ ನೀರು ಕಡಿಮೆಯಾದಾಗ ನೀರಿನಲ್ಲಿ ಮುಳಗಿ ಹೋಗಿದ್ದ ಶಿವ ದೇವಾಲಯದ ಅವಶೇಷಗಳು ಕಾಣಸಿಗುತ್ತವೆ. ಇವುಗಳನ್ನು ನೋಡಲು ಸೆ.18 ರಂದು ತೆರಳಿದ್ದ ಆರುಜನ ಅನ್ಯಕೋಮಿನ ಯುವಕರು ಶಿವ ದೇವಾಲಯದ ಅವಶೇಷಗಳನ್ನು ಕಲ್ಲಿನಿಂದ ಒಡೆದು ಹಾಕಿದ್ದರು. ಈ ವೀಡಿಯೋವನ್ನು ಹುಸೈನ್ ಶೇಖ್ ಎಂಬಾತ ಚಿತ್ರೀಕರಣ ನಡೆಸಿ ಫೇಸ್‍ಬುಕ್ ಖಾತೆಯಲ್ಲಿ ಅಪ್‍ಲೋಡ್ ಮಾಡಿ ವಿಕೃತಿ ಮೆರೆದಿದ್ದಾನೆ. ಇದನ್ನೂ ಓದಿ: ಬಂಗಾರಪ್ಪ ಸಿಎಂ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಕಾವೇರಿ ಸಮಸ್ಯೆಗೆ ಉತ್ತರ ಕೊಟ್ಟಿದ್ದರು: ಮಧು ಬಂಗಾರಪ್ಪಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದ್ದು, ಹಿಂದೂಗಳ ಭಾವನೆಗೆ ಘಾಸಿ ಗೊಳಿಸಿರುವ ಹಾಗೂ ಪುರಾತನ ದೇವರ ವಿಗ್ರಹವನ್ನು ನಾಶಪಡಿಸಿರುವ ಈ ಯುವಕರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಮನಗರ ಠಾಣೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ಯ ಗಿರೀಶ್ ಗೋಸಾಯಿ ಎಂಬವರು ದೂರು ದಾಖಲಿಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


