ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ (BJP MLA Ticket Scam) ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ (Govind Babu Poojari) ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ED) ದೂರು ದಾಖಲಾಗಿದೆ.5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ.  ಇದನ್ನೂ ಓದಿ: ರಾಜ್ಯಕ್ಕೆ 3ನೇ ವಂದೇ ಭಾರತ್ ರೈಲು – ಇಂದು ಪ್ರಾಯೋಗಿಕ ಸಂಚಾರದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ನಟರಾಜ ಶರ್ಮಾ, ಗೋವಿಂದ ಪೂಜಾರಿ ಅವರು ನೀಡಿರುವ ದೂರಿನಲ್ಲಿ ನಗದು ರೂಪದಲ್ಲಿ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಟಿಕೆಟ್‌ಗೆ 5 ಕೋಟಿ ರೂ. ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೋಲೆ. ಮುಂಬೈನಲ್ಲಿ (Mumbai) ವ್ಯವಹಾರ ಮಾಡಿಕೊಂಡಿದ್ದ ಅವರಿಗೆ 5 ಕೋಟಿ ರೂ. ಹಣವನ್ನು ನಗದು ರೂಪದಲ್ಲಿ ನೀಡಬಾರದು ಎನ್ನುವುದು ಅವರಿಗೆ ತಿಳಿದಿರಬೇಕಿತ್ತು. ಇದು ಹವಾಲಾ ಹಣ ಎಂಬ ದೃಷ್ಟಿಯಿಂದ ದೂರು ನೀಡಿದ್ದೇನೆ ಎಂದು ತಿಳಿಸಿದರು.ಈ ವಂಚನೆ ಪ್ರಕರಣದಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಾಲವಾಗಿಯೇ ಹಣ ಪಡೆದಿದ್ದರೂ ಸಾಲ ಪಡೆದ ಉದ್ದೇಶವೇ ಬೇರೆಯಾಗಿದೆ. ನಗದು ರೂಪದಲ್ಲಿ ಇಷ್ಟೊಂದು ವ್ಯವಹಾರ ನಡೆಸಿದ್ದು ಹೇಗೆ? ಇಡಿ ಈ ವಿಚಾರವಾಗಿ ತನಿಖೆ ಮಾಡಬೇಕೆಂದು ಕೋರಿ ದೂರು ನೀಡಿದ್ದೇನೆ ಎಂದು ತಿಳಿಸಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


