ರಾಯಚೂರು: ಮನೆಯ ಎರಡನೇ ಮಹಡಿಯಿಂದ ಬಿದ್ದು ಗೃಹಿಣಿಯೊಬ್ಬಳು (House Wife) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಬದ್ರಿನಾಥ ಕಾಲೋನಿಯಲ್ಲಿ ನಡೆದಿದೆ.ಶಿಲ್ಪಾ (28) ಮೃತ ಮಹಿಳೆ. ಈಕೆ ಮನೆಯ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತಳ ಪತಿ ಶರತ್ ಹಾಗೂ ಅತ್ತೆ-ಮಾವ ಸೇರಿ ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂದು ಶಿಲ್ಪಾ ಸಂಬಂಧಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೂದಲು ವ್ಯಾಪಾರಕ್ಕೆ ತೆರಳಿದ್ದ ಬಾಲಕನ ಬರ್ಬರ ಹತ್ಯೆಘಟನೆ ಹಿನ್ನೆಲೆ ಆಕ್ರೋಶದಲ್ಲಿ ಶರತ್ ತಂದೆಗೆ ಶಿಲ್ಪಾ ಸಂಬಂಧಿಕರು ಥಳಿಸಿದ್ದಾರೆ. ಮಂಗಳವಾರ ರಾತ್ರಿ ಜಗಳ ಮಾಡಿ ಎರಡನೇ ಮಹಡಿಯಿಂದ ತಳ್ಳಿದ್ದಾರೆ ಎಂದು ಆರೋಪಿಸಲಾಗಿದೆ. 2022ರ ಜೂನ್‌ನಲ್ಲಿ ಆಂಧ್ರಪ್ರದೇಶ ಆದೋನಿಯಲ್ಲಿ ಶಿಲ್ಪಾ ಹಾಗೂ ಶರತ್ ಮದುವೆಯಾಗಿತ್ತು. ಮದುವೆಯಾದಾಗಿನಿಂದಲೂ ಪತಿ-ಪತ್ನಿ ನಡುವೆ ಹೊಂದಾಣಿಕೆಯಾಗದೇ ಆಗಾಗ ಜಗಳಗಳು ನಡೆಯುತ್ತಿದ್ದವು. ಈ ಕುರಿತು ಕುಟುಂಬದ ಹಿರಿಯರು ಸಂಧಾನ ಮಾಡಿದ್ದರು. ಆದರೂ ಕೂಡ ಸಮಸ್ಯೆಗಳು ಬಗೆಹರಿದಿರಲಿಲ್ಲ ಎಂದು ಆಂಧ್ರ ಮೂಲದ ಶಿಲ್ಪಾ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಂತರಗಂಗೆ ಬೆಟ್ಟದಲ್ಲಿ ಪಾಕ್ ಬಾವುಟ ಹೋಲುವ ಪೇಂಟಿಂಗ್ – ಆರೋಪಿ ಅರೆಸ್ಟ್ಘಟನೆಯ ಬಳಿಕ ಶಿಲ್ಪಾ ಪತಿ ಶರತ್ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಪತಿ ಬರುವವರೆಗೂ ಆಕೆಯ ಮೃತದೇಹ ಎತ್ತಲು ಬಿಡಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ನೇತಾಜಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


