ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ (Siddaramaiah) ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ (Yatindra) ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ (Election Commission) ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.  ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿಯತೀಂದ್ರ ಹೇಳಿದ್ದೇನು?
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.ಆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಬೆಂಬಲ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ ಎಂದು ಯತೀಂದ್ರ ತಿಳಿಸಿದ್ದರು. 
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


