ಬೆಂಗಳೂರು: ಹುಕ್ಕಾ ಬಾರ್ ಸೇರಿದಂತೆ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನ ನಿಷೇಧಿಸಲು ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆಗೆ (COTPA) ತಿದ್ದುಪಡಿ ತರುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.ವಿಕಾಸ ಸೌಧದಲ್ಲಿ ಇಂದು ಕ್ರೀಡಾ ಸಚಿವ ನಾಗೇಂದ್ರ ಅವರ ಜೊತೆಗೂಡಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಸ್ಥಳಗಳಲ್ಲಿ ಇತರ ತಂಬಾಕು ಉತ್ಪನ್ನಗಳ ನಿಷೇಧಿಸುವ ಬಗ್ಗೆ ಚರ್ಚಿಸಿದರು.ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ಶಾಲೆಗಳ ಜೊತೆಗೆ, ದೇವಸ್ಥಾನಗಳು, ಆಸ್ಪತ್ರೆಗಳ ಸುತ್ತ ಮುತ್ತಲು ನಿಷೇಧಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ಸೂಚಿಸಿರುವುದಾಗಿ ತಿಳಿಸಿದರು.‌ ಈ ಹಿಂದಿನ ಕೋಟ್ಪಾ ಕಾಯ್ದೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆಯನ್ನ ನಿಷೇಧಿಸಲಾಗಿತ್ತು. ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನು ನಿಷೇಧಿಸುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ಬರ್ಮುಡಾ, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ! ಹುಕ್ಕಾ ಬಾರ್‌ಗಳಿಗೆ ಯುವಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಯುವಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.‌ ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಹುಕ್ಕಾ ಬಾರ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳುವುದಾಗಿ ಗುಂಡೂರಾವ್ ತಿಳಿಸಿದರು. ಹುಕ್ಕಾ ಬಾರ್ ಗಳಿಗೆ ನಿಯಂತ್ರಣ ಹೇರುವಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರು ಕೆಲವು ಸಲಹೆ ನೀಡಿದ್ದು, ಕೋಟ್ಪಾ ಕಾಯ್ದೆ ತಿದ್ದುಪಡಿಯಲ್ಲಿ ಹುಕ್ಕಾ ಬಾರ್ ಗಳಲ್ಲಿ ನಡೆಯುವ ಮಾದಕ ವಸ್ತುಗಳ ಸೇವನೆಗೆ ನಿಷೇಧ ಹೇರಲು ಕ್ರಮ ಕೈಗೊಳ್ಳುವುದಾಗಿ ಗುಂಡೂರಾವ್ ಹೇಳಿದರು.ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ, ಕಾನೂನನಲ್ಲಿ ಇದ್ದ ಅವಕಾಶವನ್ನ ಪರಿಷ್ಕರಿಸಲು ಗುಂಡೂರಾವ್ ಮುಂದಾಗಿದ್ದಾರೆ.‌ 18 ವರ್ಷದ ಬದಲು 21 ವರ್ಷದ ಮೇಲ್ಪಟ್ಟವರು ಎಂದು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಇದೇ ವೇಳೆ ತಿಳಿಸಿದರು. ಈ ಮೂಲಕ 21 ವರ್ಷದ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.ಯಾವುದೇ ಶಾಲೆ,‌ ಕಾಲೇಜು, ಆಸ್ಪತ್ರೆ, ಶಿಶುಪಾಲನಾ ಕೇಂದ್ರಗಳು, ಹೆಲ್ತ್ ಕೇರ್ ಸೆಂಟರ್, ದೇವಸ್ಥಾನಗಳು, ಮಂದಿರಗಳು, ಮಸೀದಿಗಳು, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ.‌ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಇಂದಿನ ಯುವಜನತೆ ತಮ್ಮ ಅಮೂಲ್ಯ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಬುಡಸಮೇತ ಕಿತ್ತೆಸೆಯುವ ಗಟ್ಟಿ ನಿರ್ಧಾರವನ್ನು ಮಾಡಿದ್ದೇವೆ. ತಂಬಾಕು ಸೇವನೆಯ ಬಳಿಕ ಯುವಕರು ಡ್ರಗ್ಸ್, ಮಾದಕ ವಸ್ತುಗಳ ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದರು. ಇದಕ್ಕೆಲ್ಲಾ ತಂಬಾಕು ಸೇವನೆಯೇ ಒಂದು ರೀತಿಯಲ್ಲಿ ಅಡಿಪಾಯ ಹಾಕಿ ಕೊಡುತ್ತಿತ್ತು. ಹೀಗಾಗಿ ಮೂಲದಲ್ಲೇ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


