ಬೆಂಗಳೂರು: ಕಾವೇರಿ ನೀರು (Cauvery Water Dispute) ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ. ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ನೀರು ಬಿಡುಗಡೆ ಮಾಡದೆ ಕಾನೂನು ಹೋರಾಟ ನಡೆಸಬೇಕು ಎಂಬ ಬೊಮ್ಮಾಯಿ (Basavaraj Bommai) ಅವರ ಸಲಹೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬೊಮ್ಮಾಯಿ ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಆದರೆ ಸುಪ್ರೀಂ ಕೋರ್ಟನ್ನು ಗಮನದಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ನೀರು ಬಿಡಬೇಡಿ ಎಂದು ಬೊಮ್ಮಾಯಿ ಹೇಳುತ್ತಾರೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ, ಬೊಮ್ಮಾಯಿ ಹಾಗೂ ನನ್ನ ಬಳಿ ಯಾವ ಆಯ್ಕೆ ಇದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ, ಇದನ್ನು ತೆಗೆಯಲು ಮೈತ್ರಿ ಅವಶ್ಯಕ: ಹೆಚ್‌ಡಿಕೆಬೊಮ್ಮಾಯಿ ಅವರು ರಾಜಕಾರಣ ಬದಿಗಿಡಲಿ. ಕೂಡಲೇ ಪ್ರಧಾನಿಗಳಿಗೆ ಮಧ್ಯಸ್ತಿಕೆ ವಹಿಸುವಂತೆ ಒತ್ತಡ ತರಲಿ. ನೀರು ನಿರ್ವಹಣಾ ಸಮಿತಿಗೂ ಮನವಿ ಸಲ್ಲಿಸಲಿ. ರಾಜ್ಯದ ಹಿತವನ್ನು ಅವರು ಮೊದಲು ಕಾಪಾಡಲಿ, ರಾಜಕಾರಣ ಬದಿಗಿಡಲಿ. ನಾನು ಶೀಘ್ರದಲ್ಲೇ ದೆಹಲಿಗೆ ಹೋಗಲಿದ್ದು, ಸಂಸದರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇನೆ.‌ ಮಧ್ಯಸ್ತಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದಿದ್ದಾರೆ.ರಾಜ್ಯಸಭೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನ್ಯಾಯಲಯದ ಹೊರಗಡೆ ಇತ್ಯರ್ಥ ಮಾಡಿಕೊಳ್ಳಿ ಎಂದು ಸಲಹೆ ನೀಡಿರುವುದು ಸರಿಯಾಗಿದೆ. ಹಿರಿತನದ ಅನುಭವದ ಮೇಲೆ ಅವರು ಮಾತನಾಡಿದ್ದಾರೆ. ಅವರ ಸಲಹೆ ಸ್ವೀಕಾರಾರ್ಹವಾಗಿದೆ. ನೀರಾವರಿ ಸಚಿವರಾಗಿದ್ದ ಬೊಮ್ಮಾಯಿ ಅವರು ಉಪಯುಕ್ತ ಸಲಹೆ ನೀಡಲಿ. ಅವರೇ ನೇಮಕ ಮಾಡಿದ ಕಾನೂನು ತಜ್ಞರೇ ಈಗಲೂ ಇದ್ದಾರೆ. ಅವರ ಮಾತನ್ನು ಕೇಳಬೇಕೊ ಅಥವಾ ಇವರ ಮಾತನ್ನು ಕೇಳಬೇಕೊ? ಒಳ್ಳೆ ಸಲಹೆ ನೀಡಿದರೆ ಮಾತ್ರ ಅವರ ಮಾತನ್ನು ಕೇಳುತ್ತೇವೆ ಎಂದು ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿಹಿರಿಯ ವಕೀಲರಾದ ನಾರಿಮನ್ ಅವರ ಸಲಹೆ ವಿಚಾರ ಇರಲಿ. ಈಗಿರುವ ತಂಡದಲ್ಲಿ ಅವರ ಶಿಷ್ಯರೇ ಇದ್ದಾರೆ, ಸಲಹೆ ಕೇಳಿದ್ದೇವೆ. ಇದರ ಬಗ್ಗೆ ಆನಂತರ ಮಾತನಾಡುವೆ ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


