ಹಾಸನ: ಎತ್ತಿನಹೊಳೆ ಯೋಜನೆಯನ್ನು (Yettinahole Project) 2026-27 ರೊಳಗೆ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು ಚಿಕ್ಕಬಳ್ಳಾಪುರದಲ್ಲಿ (Chikkaballapura) ತಾನೇ ನಿರ್ವಹಿಸಿ, ಇಂದು ಮೊದಲನೇ ಹಂತದ ಯೋಜನೆಯನ್ನು ಸಂತೋಷದಿಂದ ಉದ್ಘಾಟಸುತ್ತಿದ್ದೇ‌ನೆ ಎಂದರು. ಈ ಯೋಜನೆಯ ಪರಿಷ್ಕೃತ ಅಂದಾಜು 23,252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16,152ಕೋಟಿ ರೂ.ಗಳನ್ನು ವೆಚ್ಚವಾಗಿದ್ದು, ಇನ್ನುಳಿದ 6-7 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ: ಪ್ರತಾಪ್‌ ಸಿಂಹಸಕಲೇಶಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಯೋಜನೆಗೆ ಇಲ್ಲಿನ ನೀರು ಬಳಸಿಕೊಳ್ಳಲಾಗುತ್ತಿದೆ. ಈ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಬೇಡಿಕೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನೀರು ಕೊರತೆಯಿರುವ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದಾಗಿದ್ದು, ರಾಜ್ಯದ ಜನರಿಗೆ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು. Sign in to your account
Username or Email Address


Password

 Remember Me


