ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದಿನಿಂದ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಭಾಗಗಳಲ್ಲಿ ಹಲವೆಡೆ ಮಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ತಲುಪುವ ಸಾಧ್ಯತೆಯಿದೆ.ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ನಿರಂತರ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ನಗರ ಮತ್ತು ಸ್ಥಳೀಯ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 26-21
ಮೈಸೂರು: 29-21ಮಂಡ್ಯ: 30-22
ಮಡಿಕೇರಿ: 22-17
ರಾಮನಗರ: 29-22
ಹಾಸನ: 26-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-20
ಕೋಲಾರ: 28-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 25-19
ದಾವಣಗೆರೆ: 28-22ಹುಬ್ಬಳ್ಳಿ: 27-21
ಚಿತ್ರದುರ್ಗ: 27-21
ಹಾವೇರಿ: 28-22
ಬಳ್ಳಾರಿ: 30-23
ಗದಗ: 28-22
ಕೊಪ್ಪಳ: 29-22ರಾಯಚೂರು: 30-23
ಯಾದಗಿರಿ: 30-23
ವಿಜಯಪುರ: 29-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 30-23Sign in to your account
Username or Email Address


Password

 Remember Me


