ಬೆಂಗಳೂರು: ವಿಚಾರಣೆ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನ (Chaitra Kundapura) ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ಡಿಸ್ಚಾರ್ಜ್‌ ಮಾಡಲಾಗಿದೆ.ಸತತ ವೈದ್ಯಕೀಯ ತಪಾಸಣೆ ನಂತರ ಎಲ್ಲಾ ವರದಿಗಳು ನಾರ್ಮಲ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿದ್ದು, ಅಲ್ಲಿಂದ ನೇರವಾಗಿ ಪೊಲೀಸರು ಸಿಸಿಬಿ (CCB Police) ಕಚೇರಿಗೆ ಕರೆತಂದಿದ್ದಾರೆ. ಚೈತ್ರಾಳ ತಲೆ ಹಾಗೂ ಮುಖಕ್ಕೆ ಮಾಸ್ಕ್‌ ಕಟ್ಟಿಸಿ ಆಸ್ಪತ್ರೆ ಹಿಂಬಾಗಿಲಿನಿಂದ ಪೊಲೀಸರು ಕರೆ ತಂದಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್ಇಂದಿನಿಂದಲೇ ವಿಚಾರಣೆ ನಡೆಸಲು ಎಲ್ಲಾ ಹಂತದ ಸಿದ್ಧತೆ ಮಾಡಿಕೊಂಡಿದ್ದಾರೆ. ಐದಾರು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ, ನಂತರ ಸ್ಥಳ ಮಹಜರು ನಡೆಸಬೇಕು. ಬಳಿಕ ಉಳಿದ ಆರೋಪಿಗಳನ್ನೂ ಚೈತ್ರಾಳ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್ – ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


