ಕಾರವಾರ: ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆಗೈದು ಶವವನ್ನು ಗೋಣಿ ಚೀಲದಲ್ಲಿ ತುಂಬಿ ಎಸೆದು ಹೋಗಿದ್ದ ಮೂವರು ಆರೋಪಿಗಳನ್ನು ಬನವಾಸಿ (Banavas) ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿಗಳು ಹಣಕ್ಕಾಗಿ ಕೊಲೆಗೈದು ಬಳಿಕ ಕೊರ್ಲಕಟ್ಟಾ – ವಡ್ಡಿನಕೊಪ್ಪ ರಸ್ತೆಯ ಅರಣ್ಯದಲ್ಲಿ ಶವವನ್ನು ಎಸೆದು ಹೋಗಿದ್ದರು.ಬಂಧಿತ ಆರೋಪಿಗಳನ್ನು ಹಾನಗಲ್‍ನ (Hangal) ಗೆಜ್ಜೆಹಳ್ಳಿಯ ಕಿರಣ್ ಸುರಳೇಶ್ವರ (23), ನಿರಂಜನ ಗೋವಿಂದಪ್ಪ ತಳವಾರ (19) ಹಾಗೂ ಗುಡ್ಡಪ್ಪ ಕೊಟಪ್ಪ ತಿಳುವಳ್ಳಿ (19) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಹಣಕ್ಕಾಗಿ ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಚೈತ್ರಾ ಡೀಲ್ ಕೇಸ್; ನನ್ನ ಹೆಸರು ಬಂದಿರೋದು ಬೇಸರವಾಗಿದೆ- ವಜ್ರದೇಹಿ ಮಠದ ಸ್ವಾಮೀಜಿಆರೋಪಿಗಳು ಅದೇ ಗ್ರಾಮದ ಅಶೋಕ್ ಉಪ್ಪಾರ್ (55) ಎಂಬಾತನನ್ನು ಮೂರು ದಿನಗಳ ಹಿಂದೆ ಕೊಲೆ ಮಾಡಿದ್ದರು. ಬಳಿಕ ಗುರುತು ಸಿಗದಂತೆ ಶವವನ್ನು ಗೋಣಿ ಚೀಲದಲ್ಲಿ ತುಂಬಿ ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿದ್ದರು. ಆರೋಪಿಗಳಿಂದ ಸ್ವಿಪ್ಟ್, ಕ್ರೇಟಾ ಕಾರ್ ಹಾಗೂ ಒಂದು ಬೈಕ್‍ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಿರಸಿ ಡಿಎಸ್‍ಪಿ ಕೆ.ಎಲ್.ಗಣೇಶ ಮಾರ್ಗದರ್ಶನದಲ್ಲಿ ಸಿ.ಪಿ.ಐ ರಾಮಚಂದ್ರ ನಾಯಕ್, ಬನವಾಸಿ ಠಾಣೆ ಪಿ.ಎಸ್.ಐ ಚಂದ್ರಕಲಾ ಪತ್ತಾರ, ಸುನೀಲ್ ಕುಮಾರ್ ಬಿ.ವೈ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: 3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


