ಕಾರವಾರ: 14 ವಿಧ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯ ಜನತಾ ಶಾಲೆಯಲ್ಲಿ ನಡೆದಿದೆ.9 ಮತ್ತು 10 ನೇ ತರಗತಿಯ ಒಟ್ಟು 14 ವಿಧ್ಯಾರ್ಥಿನಿಯರು (Students) ಎಡಗೈ ತೋಳಿನ ಕೆಳಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಇರಲ್ಲಿ ಕೆಲವು ವಿದ್ಯಾರ್ಥಿನಿಯರು ಕೈ ಮೇಲೆ ಸ್ಟೆಪ್ಲರ್ ಪಿನ್ ನಿಂದ ಗೀರಿಕೊಂಡು ಕೈ ನರ ಕತ್ತರಿಸಿಕೊಳ್ಳಲು ಯತ್ನ ನಡೆಸಿದ್ದಾರೆ. ಶಾಲೆಯಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದ್ದು ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದರೋ ಅಥವಾ ಶಾಲೆಯಲ್ಲಿ ಯತ್ನಿಸಿದರೋ ಮಾಹಿತಿ ಹೊರಬರಬೇಕಿದೆ. ಇದನ್ನೂ ಓದಿ: ಜನ್ಮದಿನದಂದು ದೆಹಲಿಯಲ್ಲಿ ಮೋದಿ ಮೆಟ್ರೋ ರೈಡ್ – ಪ್ರಯಾಣಿಕರೊಂದಿಗೆ ಸೆಲ್ಫಿಆತ್ಮಹತ್ಯೆ ಯತ್ನಕ್ಕೆ ಕಾರಣ ನಿಗೂಢವಾಗಿದೆ. ಕೆಲವು ವಿದ್ಯಾರ್ಥಿನಿಯರು ಗೇಮ್ ಆಟದ ಟಾಸ್ಕ್ ಎಂದರೆ ಇನ್ನೂ ಕೆಲವರು ಬೇರೆಯೇ ಸಬೂಬು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಪೊಲೀಸರೊಂದಿಗೆ ಪೋಷಕರ ಸಭೆ ನಡೆಸಿ ಮಾಹಿತಿ ಕಲೆಹಾಕುವ ಪ್ರಯತ್ನ ನಡೆಸುತ್ತಿದ್ದು ತನಿಖೆ ನಡೆಯುತ್ತಿದೆ.ಘಟನೆ ಸಂಬಂಧ ದಾಂಡೇಲಿ ನಗರ ಠಾಣೆಯಲ್ಲಿ ದೂರು ನೀಡಲಾಗಿದ್ದು ಈವರೆಗೂ ಪ್ರಕರಣ ದಾಖಲಾಗಿಲ್ಲ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


