ಹಾಸನ: ಪೂಜೆಗೆ ತೆರಳಿದ್ದ ವೈದ್ಯರೊಬ್ಬರು (Doctor) ಹೇಮಾವತಿ ನದಿಯ (Hemavati River) ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಖೋನಾಪುರದಲ್ಲಿ ನಡೆದಿದೆ.ಮೃತರನ್ನು ಡಾ.ಚಂದ್ರಶೇಖರ್ (31) ಎಂದು ಗುರುತಿಸಲಾಗಿದೆ. ಅವರು ಹೊಳೆನರಸಿಪುರದ (Holenarasipur) ಕೆರಗೋಡಿನಲ್ಲಿ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಕರ್ತವ್ಯಕ್ಕೆ ತೆರಳುವ ಮುನ್ನ ಖೋನಾಪುರದ ಐಲ್ಯಾಂಡ್‍ನಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದರು. ಈ ವೇಳೆ ನದಿಗೆ ಸ್ನಾನಕ್ಕೆ ತೆರಳಿದ್ದಾಗ ಈ ಅವಘಡ ನಡೆದಿದೆ. ಇದನ್ನೂ ಓದಿ: ಚೈತ್ರಾ ಗ್ಯಾಂಗ್ ವಂಚನೆ ಪ್ರಕರಣ – ಸಿಸಿಬಿಯಿಂದ ಸ್ಥಳ ಮಹಜರುಹಲವು ವರ್ಷಗಳಿಂದಲೂ ಚಂದ್ರಶೇಖರ್ ಹೇಮಾವತಿ ನದಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸುತ್ತಿದ್ದರು. ಅದರಂತೆ ಚಂದ್ರಶೇಖರ್ ಶುಕ್ರವಾರ ಸಹ ಪೂಜೆಗೂ ಮುನ್ನ ನದಿಗೆ ಇಳಿದಿದ್ದರು. ಹೇಮಾವತಿ ನದಿ ನೀರು ಸಂಪೂರ್ಣ ಕಡಿಮೆಯಾಗಿದ್ದು, ಆಳ ಅರಿಯದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ರಾತ್ರಿ ಆದರೂ ಮನೆಗೆ ವಾಪಸ್ ಆಗದ ಹಿನ್ನೆಲೆ ಪೋಷಕರು ಚಂದ್ರಶೇಖರ್‌ಗೆ ಕರೆ ಮಾಡಿದ್ದಾರೆ. ಫೋನ್ ರಿಸೀವ್ ಮಾಡದೇ ಇದ್ದಾಗ ಗಾಬರಿಗೊಂಡ ಪೋಷಕರು ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಗೊರೂರು ಪೊಲೀಸರಿಗೆ ಮಾಹಿತಿ ರವಾನೆಯಾಗಿತ್ತು, ಗಸ್ತಿನಲ್ಲಿದ್ದ ಗೊರೂರು ಪೊಲೀಸರು ಒಂದೇ ಸ್ಥಳದಲ್ಲಿ ಕಾರು ನಿಂತಿದ್ದನ್ನು ಗಮನಿಸಿದ್ದರು. ಈ ವೇಳೆ ಹುಡಕಾಟ ನಡೆಸಿದಾಗ ನದಿಯ ದಡದಲ್ಲಿ ಚಂದ್ರಶೇಖರ್ ಬಟ್ಟೆ ಪತ್ತೆಯಾಗಿತ್ತು. ಬಳಿಕ ನದಿಯಲ್ಲಿ ಚಂದ್ರಶೇಖರ್ ಶವ ತೇಲುತ್ತಿರುವುದು ಪತ್ತೆಯಾಗಿತ್ತು.ನಂತರ ಪೊಲೀಸರು ಶವವನ್ನು ಹೊರಗೆ ತೆಗೆದಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವರ್ಗಾವಣೆ ಮಾಡಿದರೂ ಜಾಗ ಖಾಲಿ ಮಾಡದ ಮುಕ್ತ ವಿವಿ ಹಣಕಾಸು ಅಧಿಕಾರಿ!Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


