ಚಿಕ್ಕೋಡಿ/ಅಮರಾವತಿ: ತಿರುಪತಿ (Tirupati) ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 5 ಜನರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ (Andhra Pradesh) ನಡೆದಿದೆ.ಅನ್ನಮಾಯ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಂದು (ಶುಕ್ರವಾರ) ಬೆಳಗಿನ ಜಾವ 3:30 ರ ಸುಮಾರಿಗೆ ಕಡಪ-ಚಿತ್ತೂರ ರಾಷ್ಟ್ರೀಯ ಹೆದ್ದಾರಿಯಯಲ್ಲಿ ಆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: 8 ಎಕರೆ ಜಮೀನು ಖರೀದಿ, ಪೆಟ್ರೋಲ್ ಬಂಕ್ ನಿರ್ಮಾಣ – ಅಭಿನವ ಹಾಲಾಶ್ರೀ ಈಗ ನಾಪತ್ತೆಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32), ಹನುಮಂತ ಆಜೂರ (42) ಹಾಗೂ ಚಾಲಕ ಹನುಮಂತ ಜಾಧವ (32) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.11 ಜನರನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಒಂದೇ ಕುಟುಂಬದ ಒಟ್ಟು 16 ಜನ ತಿರುಪತಿ ದರ್ಶನಕ್ಕೆ ತೆರಳಿದ್ದರು. ಕ್ರೂಸರ್ ವಾಹನ ಮಾಡಿಕೊಂಡು ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ತಿರುಪತಿ ದರ್ಶನ ಮುಗಿಸಿಕೊಂಡು ರಾತ್ರಿ ವಾಪಸ್ ಆಗುತ್ತಿದ್ದಾಗ ಅಪಘಾತವಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಅಂಜುಮಾನ್ ಅರ್ಜಿ ವಜಾ – ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪನಿಗೆ ಇಲ್ಲ ವಿಘ್ನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


