ಯಾದಗಿರಿ: ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 15 ಲಕ್ಷ ರೂ. ಮೌಲ್ಯದ 150 ಕೆ.ಜಿ ಶ್ರೀಗಂಧದ (Sandalwood) ತುಂಡುಗಳನ್ನು ಅರಣ್ಯಾಧಿಕಾರಿಗಳು (Forest Department) ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ಬಗ್ಗಲಮಡು-ಹಂದಿರಕಿ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.ಶ್ರೀಗಂಧ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಮಹಾರಾಷ್ಟ್ರದ ಸತಾರ ಜಿಲ್ಲೆಯ ಆರೋಪಿ ಸಚಿನ್ ಎಂಬಾತ ಸಿಕ್ಕಿಬಿದ್ದಿದ್ದಾನೆ. ಮತ್ತೋರ್ವ ಆರೋಪಿ ಪಾಂಡುರಂಗ ಎಂಬಾತ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮುಖ ನೋಡಿ ಯಾರ್ ದುಡ್ಡು ಕೊಡ್ತಾರೆ ಮೇಡಂ: ಚೈತ್ರಾ ಹೇಳಿದ್ದೇನು?ಈ ಬಗ್ಗೆ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್ ಪ್ರತಿಕ್ರಿಯಿಸಿ, ಬಂಧಿತನಿಂದ 1.5 ಕ್ವಿಂಟಾಲ್ ಶ್ರೀಗಂಧ, ಒಂದು ಕಾರು, ಒಂದು ಬೈಕ್ ಹಾಗೂ ಎರಡು ಕೊಡಲಿ ಜಪ್ತಿ ಮಾಡಲಾಗಿದೆ ಎಂದಿದ್ದಾರೆ. ಈ ಸಂಬಂಧ ಅರಣ್ಯ ರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಣಕ್ಕಾಗಿ ಗರ್ಭಿಣಿ ಪತ್ನಿಯ ಕತ್ತನ್ನು ಬ್ಲೇಡ್‍ನಿಂದ ಕೂಯ್ದು ಕೊಲೆಗೈದ ಪತಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


