ಬೆಂಗಳೂರು: ರಾಜ್ಯದಲ್ಲಿ ತೆರಿಗೆ ವಂಚನೆ (Tax Evasion), ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ (Commercial Tax Department) ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಸುಲಭವಾಗಿ ಸಿಕ್ಕ 50 ಲಕ್ಷಕ್ಕೆ ಚೈತ್ರಾ ಫಿದಾ – 3.5 ಕೋಟಿಗೆ ಶುರುವಾದ ಪ್ಲಾನ್ 5 ಕೋಟಿಗೆ ಏರಿದ್ದೇ ರೋಚಕಮುಖ್ಯಮಂತ್ರಿ @siddaramaiah ಅವರು ಇಂದು ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಚರ್ಚಿಸಿದರು. ಸಭೆಯಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು,… pic.twitter.com/cTJJJqk5wT— CM of Karnataka (@CMofKarnataka) September 14, 2023ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ 19.2% ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳದೇ ತೆರಿಗೆ ವಂಚಿಕೆ ಪ್ರಕರಣಗಳನ್ನ ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನ ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದು ಸಲಹೆ ನೀಡಿದರು.ಇಲಾಖೆಯು Enforcement ಅನ್ನು ಇನ್ನಷ್ಟು ತೀವ್ರವಾಗಿ ನಡೆಸುವ ಮೂಲಕ ತೆರಿಗೆ ವಂಚನೆ ತಡೆಗಟ್ಟುವ ಕಡೆಗೆ ಹೆಚ್ಚು ಆಸಕ್ತಿ ಕೊಡಬೇಕು. ಬೆಳವಣಿಗೆ ದರವು 19.2% ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚು. ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ 15% ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು 9.4% ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.24% ಬೆಳವಣಿಗೆ ಗುರಿಯನ್ನು ನೀಡಲಾಗಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಈ ಗುರಿ ದಾಟಿ ಸಾಧಿಸಬೇಕು. ತೆರಿಗೆ ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.ಗುರಿಗಿಂತ ಹೆಚ್ಚಿನ ಸಾಧನೆಯಾಗಬೇಕು. ಜಾಗೃತ ದಳದವರೂ ಇದಕ್ಕೆ ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯವಾಗಿರುವಂತೆ ಕ್ರಮ ವಹಿಸಿ ಎಂದು ಹೇಳಿದರು. ಇದನ್ನೂ ಓದಿ: ಐಸಿಸ್ ಉಗ್ರನೊಂದಿಗೆ ನಿರಂತರ ಸಂಪರ್ಕ – ಎನ್‍ಐಎಯಿಂದ ಯಾದಗಿರಿ ವ್ಯಕ್ತಿ ವಿಚಾರಣೆತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ. ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದು ತಿಳಿಸಿದರು.ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್‌ ಹಾಗೂ ಡಾ.ಎಂ.ಟಿ ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


