ಬೆಂಗಳೂರು: ತಮಿಳುನಾಡಿಗೆ (Tamil Nadu) ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿರುವುದು ಸರ್ಕಾರಕ್ಕೆ ಇಕ್ಕಟ್ಟಿಗೆ ಸಿಲುಕಿಸಿದೆ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ಇಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದು, ನೀರು ಹರಿಸುವುದು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.ಕಾವೇರಿ ನೀರಿನ (Cauvery River) ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ರಾಜ್ಯದ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆಆರ್‌ಎಸ್ ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿಗೆ ಹರಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿಗಳು, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿದ್ದಾರೆ. ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಲು ಮನವಿ ಮಾಡಿದ್ದಾರೆ.ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲೂಕುಗಳು ಮುಂಗಾರು ವೈಫಲ್ಯದಿಂದ ತೀವ್ರ ಬರಕ್ಕೆ ತುತ್ತಾಗಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಜಿ20 ಯಶಸ್ಸಿಗೆ ಭಾರತ, ಪ್ರಧಾನಿ ಮೋದಿ ಹೊಗಳಿದ ಪಾಕಿಸ್ತಾನ ಜನಜೂನ್ ತಿಂಗಳಿನಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ಪಾತ್ರದಲ್ಲಿ ಮುಖ್ಯಮಂತ್ರಿಗಳು ವಿವರಿಸಿದ್ದಾರೆ.ಸೆಪ್ಟೆಂಬರ್ 12 ಹಾಗೂ 24 ರವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಸೆಪ್ಟೆಂಬರ್ 12 ರಂದು 24.233 ಟಿಎಂಸಿ ಸಂಗ್ರಹವಿದ್ದು (Live Storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


