ಕೋಲಾರ: ವಿಚ್ಛೇದಿತ ಪತ್ನಿಗೆ ಜೀವನ ನಿರ್ವಹಣೆ ಭತ್ಯೆ ನೀಡುವ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವುದು ಶ್ರೀನಿವಾಸಪುರದ ನಂಬಿಹಳ್ಳಿಯಲ್ಲಿ ನಡೆದಿದೆ.ಕೊಲೆಯಾದ (Murder) ಮಹಿಳೆಯನ್ನು ರಾಧ ಎಂದು ಗುರುತಿಸಲಾಗಿದೆ. ಆಕೆಯ ಮಾಜಿ ಪತಿ ನಾಗೇಶ್ ಕೊಲೆಗೈದ ಆರೋಪಿಯಾಗಿದ್ದಾನೆ. ಆತ ವಿಚ್ಛೇದಿತ ಪತ್ನಿ ರಾಧಳಿಗೆ 8 ಸಾವಿರ ರೂ. ಮಾಸಿಕ ಭತ್ಯೆ ನೀಡಬೇಕು ಎಂದು ನ್ಯಾಯಾಲಯ (Court) ವಿಚ್ಛೇದನ ನೀಡುವ ವೇಳೆ ತೀರ್ಪು ನೀಡಿತ್ತು. ಇದೇ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆ ಸಹ ನಡೆಯುತ್ತಿತ್ತು. ಈಗ ಇಬ್ಬರ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಅಲ್ಲದೇ ರಾಧಳನ್ನು ಬಿಡಿಸಲು ಹೋದ ಆಕೆಯ ಸಹೋದರಿ ಹಾಗೂ ತಂದೆಯ ಮೇಲೂ ಮಚ್ಚಿನಿಂದ ಆರೋಪಿ ದಾಳಿ ನಡೆಸಿದ್ದಾನೆ. ಇದನ್ನೂ ಓದಿ: ರೈಲು ಪ್ರಯಾಣದ ವೇಳೆ 8 ಯುವಕರಿಗೆ ಮತ್ತು ಬರೋ ಚಾಕ್ಲೇಟ್ ನೀಡಿ ದರೋಡೆಆರೋಪಿ ಕೊಲೆಯ ಬಳಿಕ ಮನೆಯೊಂದರ ಒಳಗೆ ಅಡಗಿಕೊಂಡಿದ್ದ. ಒಳಗೆ ಬರುವ ಪ್ರಯತ್ನ ಮಾಡಿದರೆ ಸಿಲಿಂಡರ್‍ನಿಂದ ಗ್ಯಾಸ್ ಲೀಕ್ ಮಾಡಿ ಬೆಂಕಿ ಹಚ್ಚಿಕೊಳ್ಳುವ ಬೆದರಿಕೆ ಹಾಕಿದ್ದಾನೆ. ಆದರೂ ಪೊಲೀಸರು ಆತನ ಬಂಧನಕ್ಕೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಮೇಲೂ ದಾಳಿ ನಡೆಸಿದ್ದು, ಆರೋಪಿಯ ಕಾಲು ಹಾಗೂ ಕೈಗೆ ಐದು ಸುತ್ತಿನ ಗುಂಡು ಹಾರಿಸಿ ಬಂಧಿಸಲಾಗಿದೆ. ಈ ವೇಳೆ ಉಂಟಾದ ಜನಜಂಗುಳಿಯನ್ನು ಚದುರಿಸಲು ಪೊಲೀಸರು ಅಶ್ರುವಾಯುವನ್ನು ಸಿಡಿಸಿದ್ದಾರೆ.ಕೋಲಾರ ಎಸ್ಪಿ ನಾರಾಯಣ್ ಸೇರಿದಂತೆ 10 ಜನ ಪೊಲೀಸರಿಗೆ ಈ ವೇಳೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ನಾಗೇಶ್‍ಗೂ ಸಹ ಚಿಕಿತ್ಸೆ ನೀಡಲಾಗುತ್ತಿದೆ.ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಉದ್ಯಮಿಗೆ ವಂಚನೆ ಪ್ರಕರಣ – ಕೇಸ್‌ ದಾಖಲಾಗುತ್ತಿದ್ದಂತೆ ಸ್ವಾಮೀಜಿ ನಾಪತ್ತೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


