ಬೆಂಗಳೂರು: ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಅಗತ್ಯ ನಿವೇಶನಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒ ಗಳಿಗೆ ಸೂಚಿಸಿದರು.ವಿಧಾನಸೌಧದ (Vidhanasoudha) ಸಭಾಂಗಣ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನದ ಕೊರತೆ ಇದೆ. ಸರ್ಕಾರಿ ಪ್ರಾಥಮಿಕ ಶಾಲೆಗಳು, ಸರ್ಕಾರದ ಸಮುದಾಯ ಭವನಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಅನುಮತಿ ನೀಡಬೇಕೆಂದು ಸಚಿವರು ಮುಖ್ಯಮಂತ್ರಿ ಬಳಿ ಮನವಿ ಮಾಡಿದರು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಶೀಘ್ರದಲ್ಲೇ ತುಂಬಲಾಗುವುದು ಎಂದಿದ್ದಾರೆ. ಇದನ್ನೂ ಓದಿ: Nipah virus ಭೀತಿ: ಗುಂಡ್ಲುಪೇಟೆ ಮೂಲೆಹೊಳೆ ಚೆಕ್‍ಪೋಸ್ಟ್‌ನಲ್ಲಿ ಅಲರ್ಟ್ಇದೇ ವೇಳೆ ಮೈಸೂರಿನಲ್ಲಿ ಆಗಸ್ಟ್ 30 ರಂದು ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಸೌಲಭ್ಯಗಳ ವಿತರಣೆ ಸಮಾರಂಭದ ಯಶಸ್ಸಿಗೆ ಸಹಕರಿಸಿದ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು ಹಾಗೂ ಅಧಿಕಾರಿಗಳಿಗೆ ಸಭೆಯಲ್ಲಿ ಧನ್ಯವಾದ ತಿಳಿಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


