ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ (Kerala) ನಿಫಾ ವೈರಸ್‌ನಿಂದಾಗಿ (Nipah Virus) ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ (Karnataka) ರೋಗದ ಭೀತಿ ಹುಟ್ಟಿಕೊಂಡಿದ್ದು, ಅದು ಹರಡದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕರ್ನಾಟಕದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
1. ನಿಫಾ ವೈರಸ್ ನಿಂದ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ಮತ್ತು ಜಾಗರೂಕತೆ ಕ್ರಮವಹಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಾಸ ಸೌಧ ಬೆಂಗಳೂರು ಇವರಿಗೆ ಸೂಚಿಸಿದೆ.2. ನಿಫಾ ವೈರಸ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಭೆಯನ್ನು ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕೋಝಿಕ್ಕೋಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ನಿಫಾ ವೈರಸ್‌ ದೃಢ4. ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಫಾ ವೈರಸ್ ನಿರ್ವಹಣೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಅನ್ನು ಕಾಯ್ದಿರಿಸುವಂತೆ ಹಾಗೂ ಆಮ್ಲಜನಕ ಮತ್ತು ಇತರ ಅಗತ್ಯ ಔಷಧಿಗಳನ್ನೊಳಗೊಂಡಂತೆ ಎಲ್ಲಾ ಪಿಎಚ್ ವೈದ್ಯಾಧಿಕಾರಿಗಳಿಗೆ ಜ್ವರದ ಕಣಾವಲು ಘಟಕಗಳನ್ನು ಬಲಪಡಿಸಲು ಸೂಚಿಸಿದೆ. ಅಲ್ಲದೆ ಅಗತ್ಯವಿರುವ ಔಷಧಿಗಳನ್ನು ಶೇಖರಿಸಿಟ್ಟುಕೊಳ್ಳಲು ಮತ್ತು ನಿಫಾ ರೋಗಲಕ್ಷಣಗಳಿಗೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು.5. ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗಿರುವ ಯಾವುದೇ ಶಂಕಿತ ಪುಕರಣಗಳ ಮಾದರಿಗಯನ್ನು ಪುಣೆಯಲ್ಲಿನ ಎನ್‌ಐವಿ ಪುಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಬೇಕು.6. ಸಾರ್ಜನಿಕರಿಗೆ ಈ ಬಗ್ಗೆ ತಿಳುವಳಿಕೆ ನೀಡಲು, ಅರಿವು ಮೂಡಿಸಲು, ಜಾಗೃತವಹಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


